ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್. ತೋಷಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ವಿರುದ್ಧ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಇನ್ನೆರಡು ಪ್ರಕರಣಗಳಲ್ಲಿ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ. ನೂರಾರು ಸಂಖ್ಯೆಯಲ್ಲಿ ಇಮ್ರಾನ್ ಬೆಂಬಲಿಗರು ನ್ಯಾಯಾಲಯದ ಹೊರಗೆ ಜಮಾಯಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಹೊರಡಿಸಿರುವ ನ್ಯಾಯಾಲಯ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ. ಇಮ್ರಾನ್ ಅವರು ನ್ಯಾಯಾಲಯಕ್ಕೆ ಹಾಜರಾಗದೇ ಇದ್ದದ್ದು ಇದಕ್ಕೆ ಕಾರಣವಾಗಿತ್ತು. ಅವರು ಹಾಜರಾಗದ ಕಾರಣ ಈ ಹಿಂದೆ ಎರಡು ಬಾರಿ ಪ್ರಕರಣವನ್ನು ಮುಂದೂಡಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy