ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಕದನ ಮುಂದುವರದಿದ್ದು ಇದೀಗ ನ್ಯಾಯಾಲಯದ ಮೆಟ್ಟಿಲೇರಿದ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ಕೇಸ್ ಹಾಕಿದ್ದು ಸಾಮಾಜೀಕ ಜಾಲತಾಣದಲ್ಲಿ ಮತ್ತು ಮಾದ್ಯಮದಲ್ಲಿ ಸುಳ್ಳು ಆರೋಪದ ಮೂಲಕ ನನ್ನ ತೇಜೋವದೆ ಮಾಡಲಾಗಿದೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಒಂದು ಕೋಟಿ ಹಣವನ್ನು ಪರಿಹಾರವಾಗಿ ಕೊಡಿಸಿಕೊಡಬೇಕು ಎಂದು ಪ್ರಕರಣ ದಾಖಲಿಸಿದ್ದಾರೆ.
ರೋಹಿಣಿ ಸಿಂಧೂರಿ ಪರ ಹಾಜರಾದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ಆರೋಪಿ ಡಿ.ರೂಪಾ ದೂರುದಾರರ ವಿರುದ್ಧ ಕಪೋಲಕಲ್ಪಿತ ಆರೋಪ ಮಾಡಿದ್ದಾರೆ.
ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಅವರು ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿದರು. ಅಲ್ಲದೆ, ಐಎಎಸ್ ನಿಯಮಗಳಿಗೆ ವಿರುದ್ಧವಾಗಿ ಮಾಧ್ಯಮಗಳ ಮುಂದೆ ಬಹಿರಂಗವಾಗಿ ನನ್ನನ್ನು ಟೀಕೆ ಮಾಡಿದ್ದಾರೆ. ಇದು ನನಗೆ ಮಾತ್ರವಲ್ಲದೆ ಸರ್ಕಾರಕ್ಕೂ ಮುಜುಗುರ ಉಂಟು ಮಾಡಿದೆ. ಆದ್ದರಿಂದ, ನನಗಾಗಿರುವ ಮಾನನಷ್ಟಕ್ಕೆ ಒಂದು ಕೋಟಿ ರು. ಪರಿಹಾರವಾಗಿ ಕೊಡಿಸಿಕೊಡಬೇಕು. ರೂಪಾ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಕೋರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


