ಬೀದರ್: ಔರಾದ ತಾಲೂಕಿನ ಕೊಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಬಳಿ ಮೂರು ಶೌಚಾಲಯಗಳನ್ನು ಕಟ್ಟಿಸಲಾಗಿದ್ದು, ಆದರೆ ಇಲ್ಲಿ ಪ್ರಮುಖವಾಗಿ ಬೇಕಾಗಿರುವ ನೀರಿನ ವ್ಯವಸ್ಥೆಯನ್ನೇ ಮಾಡಲಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಗುತ್ತಿಗೆದಾರರು ಕೇವಲ ಶೌಚಾಲಯ ಕಟ್ಟಿಸಲು ಮಾತ್ರವೇ ಉತ್ಸಾಹ ತೋರಿಸುತ್ತಿದ್ದಾರೆ. ಒಂದೇ ಪ್ರದೇಶದಲ್ಲಿ ಮೂರು ಶೌಚಾಲಯಗಳನ್ನು ಕಟ್ಟಿಸಲಾಗಿದೆ. ಆದರೆ ಇಲ್ಲಿ ನೀರಿನ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ತೀವ್ರವಾಗಿ ಪರದಾಡುತ್ತಿದ್ದಾರೆ.
ಗುತ್ತಿಗೆದಾರರು ಅವ್ಯವಹಾರ ಮಾಡುವ ಉದ್ದೇಶದಿಂದ ಕೇವಲ ಶೌಚಾಲಯ ಕಟ್ಟಲು ಮುಂದಾಗಿದ್ದಾರೆ ಎಂದು ಆರೋಪಿಸಿರುವ ಇಲ್ಲಿನ ನಾಗರಿಕರು ನಮಗೆ ಮೊದಲು ನೀರಿನ ವ್ಯವಸ್ಥೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


