ಕೋಲಾರದಲ್ಲಿ ಸಿದ್ಧರಾಮಯ್ಯ ಗೆದ್ದರೆ ಅವರು ಹೇಳಿದಂತೆ ನಾನು ಕೇಳುತ್ತೇನೆ ಎಂದು ಶಾಸಕ ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಿದ್ಧರಾಮಯ್ಯ ಒಮ್ಮೆ ಕೋಲಾರದಿಂದ ಸ್ಪರ್ಧಿಸುತ್ತೇನೆ ಎನ್ನುತ್ತಾರೆ. ಮತ್ತೊಮ್ಮೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳುತ್ತಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಅವರಿಗೆ ಏನು ರೋಗ? ಎಂದು ಲೇವಡಿ ಮಾಡಿದರು.
ಕೋಲಾರ ಕ್ಷೇತ್ರದ ದಲಿತರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಕಪಾಳಕ್ಕೆ ಹೊಡೆದು ಸೋಲಿಸಲು ಕಾಯುತ್ತಿದ್ದಾರೆ. ಜಿ ಪರಮೇಶ್ವರ್, ಮುನಿಯಪ್ಪ ಅವರನ್ನು ಸೋಲಿಸಿದ್ದನ್ನು ದಲಿತರು ಮರೆತಿಲ್ಲ ಎಂದು ಟಾಂಗ್ ನೀಡಿದರು.
ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ಬೇಡ, ಕಾಂಗ್ರೆಸ್ಸಿಗರೇ ಸಾಕು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಜನ ಉತ್ತರ ಕೊಡುವ ಕಾಲ ಬಂದಿದೆ ಎಂದು ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


