ಕಳಪೆ ಆಹಾರ ಒತ್ತಡ ಜೀವನದಿಂದಾಗಿ ಕೂದಲು ಉದುರುವ ಸಮಸ್ಯೆ ಕೂಡ ಹೆಚ್ಚಾಗಿ ಕಂಡುಬರುತ್ತದೆ. ಇದನ್ನು ನಿಯಂತ್ರಿಸಲು ಜನರು ಅನೇಕ ಬಗೆಯ ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳನ್ನು ಬಳಸುತ್ತಾರೆ.ಆದರೆ ಎಳ್ಳೆಣ್ಣೆಯನ್ನು ಬಳಸುವುದರಿಂದ ಕೂದಲು ಉದುರುವ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.
ಇದರಲ್ಲಿ ಅನೇಕ ವಿಧದ ಆಂಟಿಆಕ್ಸಿಡೆಂಟ್ಗಳು ಮತ್ತು ವಿಟಮಿನ್ ಇ ಇದೆ. ಇವು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಮತ್ತು ಆರೋಗ್ಯಕರವಾಗಿರಲು ಸಹಾಯ ಮಾಡುತ್ತದೆ. ಕೂದಲಿಗೆ ಎಳ್ಳಿನ ಎಣ್ಣೆಯನ್ನು ಹಲವು ವಿಧಗಳಲ್ಲಿ ಬಳಸಬಹುದು. ಆದರೆ ಇದನ್ನು ಮನೆಯಲ್ಲಿಯೇ ಮಾಡಿ ಉಪಯೋಗಿಸಿದರೆ ಹೆಚ್ಚು ಲಾಭವಾಗುತ್ತದೆ. ಇದಕ್ಕಾಗಿ ಮೊದಲು ಎಳ್ಳನ್ನು ತೆಗೆದುಕೊಂಡು ಸಾಸಿವೆ ಎಣ್ಣೆಯಲ್ಲಿ ಬೇಯಿಸಿಕೊಳ್ಳಬೇಕು. ಬಳಿಕ ಈ ಎಣ್ಣೆಯನ್ನು ಫಿಲ್ಟರ್ ಮಾಡಿ ಕೂದಲಿಗೆ ಹಚ್ಚಿ ಮಸಾಜ್ ಮಾಡಬೇಕು.
ಎಳ್ಳಿನ ಎಣ್ಣೆಯು ಕೂದಲಿಗೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ. ಇದು ನೆತ್ತಿಯ ಸೋಂಕು ಮತ್ತು ಕೂದಲಿನ ಅನೇಕ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಈ ಎಣ್ಣೆಯನ್ನು ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆ ನಿವಾರಣೆಯಾಗುತ್ತದೆ.ಎಳ್ಳಿನ ಎಣ್ಣೆಯು ಕೂದಲಿನ ಬೇರುಗಳನ್ನು ಗಟ್ಟಿಗೊಳಿಸುತ್ತದೆ. ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ.ಎಳ್ಳೆಣ್ಣೆಯನ್ನು ಬಳಸುವುದರಿಂದ ಕೂದಲಿಗೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಇದನ್ನು ಕೂದಲಿಗೆ ನಿಯಮಿತವಾಗಿ ಬಳಸಬಹುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy