ಮಂಡ್ಯ: ಜಿಲ್ಲೆಯ ಚಿಕ್ಕಬೋರೇಗೌಡನದೊಡ್ಡಿ ಗ್ರಾಮದಲ್ಲಿ ಬುಧವಾರ ಚಿರತೆಯೊಂದು 15 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದೆ.
ಬುಧವಾರ ಸಂಜೆ ಗೌತಮ್ (15) ಎಂಬ ಬಾಲಕ ತಮ್ಮ ಜಮೀನಿನ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ದಾಳಿ ಮಾಡಿದ ಚಿರತೆ ಆತನ ಕಿವಿ, ಕತ್ತು ಕೆನ್ನಯ ಭಾಗದಲ್ಲಿ ಕಚ್ಚಿ ಗಾಯಗೊಳಿಸಿದೆ.
ಇದೇ ವೇಳೆ ಸಮೀಪದಲ್ಲಿಯೇ ಇದ್ದ ಬಾಲಕನ ಸಹೋದರ ಚಿರತೆ ಚಿರತೆ ಎಂದು ಕಿರುಚಲು ಆರಂಭಿಸಿದಾಗ ಚಿರತೆ ಅಲಿಂದ ಓಡಿಹೋಗಿ ಬಾಲಕ ಬದುಕುಳಿದಿದ್ದಾನೆ. ನಂತರ ಬಾಲಕನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿರತೆ ಹಿಡಿಯುವಂತೆ ಪೋಷಕರು ಹಾಗೂ ಗ್ರಾಮಸ್ಥರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


