ಬೆಂಗಳೂರು: ತಾಯಿ ಮೃತಪಟ್ಟಿದ್ದಾಳೆ ಎಂಬ ಅರಿವು ಇಲ್ಲದೆ ಬಾಲಕನೋರ್ವ ಎರಡು ದಿನಗಳ ಕಾಲ ತಾಯಿಯ ಮೃತದೇಹದ ಪಕ್ಕದಲ್ಲೇ ಸಮಯ ಕಳೆದಿರುವ ಘಟನೆ ಬೆಂಗಳೂರಿನ ಗಂಗಾ ನಗರದಲ್ಲಿ ನಡೆದಿದೆ.
40 ವರ್ಷದ ಅಣ್ಣಮ್ಮ ಮಲಗಿದ್ದ ಸ್ಥಿತಿಯಲ್ಲೇ ಮನೆಯಲ್ಲಿ ಸಾವನ್ನಪ್ಪಿದ್ದರು. ಆದರೆ ಈ ಬಗ್ಗೆ ತಿಳಿಯದ ಆಕೆಯ 11 ವರ್ಷದ ಮಗ ತಾಯಿಯ ಮೃತದೇಹದೊಂದಿಗೆ ಸಮಯ ಕಳೆದಿದ್ದಾರೆ. ಸ್ಥಳೀಯರು ನೀಡಿರುವ ಮಾಹಿತಿ ಅನ್ವಯ ಅಣ್ಣಮ್ಮ ತನ್ನ ಮಗನ ಜೊತೆ ಒಂಟಿಯಾಗಿ ವಾಸವಿದ್ದರು. ಆದರೆ ಅವರು ಕಳೆದ ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಮನೆಯಿಂದ ದುರ್ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಮನೆಯಲ್ಲಿ ಗಮನಿಸಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಗಂಗಾನಗರದ ಸ್ಥಳೀಯ ಸರ್ಕಾರಿ ಶಾಲೆಯೊಂದರ ಮನೆಯಲ್ಲಿ ಅಣ್ಣಮ್ಮ ಮಗನೊಂದಿಗೆ ವಾಸಿಸುತ್ತಿದ್ದರು. ಅಣ್ಣಮ್ಮ ಅವರ ಪತಿ ಕಳೆದ ಕೆಲ ವರ್ಷಗಳ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಮಾತನಾಡಲು ಬಾರದ ಅಣ್ಣಮ್ಮ ಕೂಲಿ ಕೆಲಸ ಮಾಡಿಕೊಂಡು ಮಗನನ್ನು ನೋಡಿಕೊಳ್ಳುತ್ತಿದ್ದರು. ಆದರೆ ಏಕಾಏಕಿ ಕಳೆದ ಎರಡು ದಿನಗಳ ಹಿಂದೆ ನಿದ್ದೆ ಮಾಡುತ್ತಿದ್ದ ಸ್ಥಿತಿಯಲ್ಲೇ ಸಾವನ್ನಪ್ಪಿದ್ದಾರೆ.
ತಾಯಿ ಸಾವನ್ನಪ್ಪಿರುವ ಬಗ್ಗೆ ಅರಿವು ಇಲ್ಲದ ಮಗ ಮೃತದೇಹದೊಂದಿಗೆ ಎರಡು ದಿನ ಕಳೆದಿದ್ದಾನೆ. ಇನ್ನು ತಾಯಿ ಮಲಗಿದ್ದಾಳೆ ಎಂದು ತಿಳಿದುಕೊಂಡಿದ್ದ ಮಗ, ಅಮ್ಮ ಮನೆಯಲ್ಲಿ ಮಲಗಿದ್ದಾಳೆ ಅಡುಗೆ ಏನು ಮಾಡಿಲ್ಲ ಅಂತ ಹೇಳಿ ನಿತ್ಯ ಶಾಲೆಗೆ ಹೋಗುತ್ತಿದ್ದನಂತೆ. ಸಂಜೆ ಮನೆಗೆ ಬಂದು ಆಟವಾಡುತ್ತಿದ್ದ ಕಾಲ ಕಳೆಯುತ್ತಿದ್ದನಂತೆ. ರಾತ್ರಿಯಾಗುತ್ತಿದ್ದಂತೆ ಸಂಬಂಧಿಗಳ ಮನೆಗೆ ಹೋಗಿ ಅಮ್ಮ ಮಲಗಿದ್ದಾಳೆ ಅಂತ ಹೇಳಿ ಊಟ ಮಾಡಿಕೊಂಡು ಬಂದು ಮನೆಗೆ ಬಂದು ಅಮ್ಮನ ಮೃತದೇಹದ ಪಕ್ಕದಲ್ಲೇ ಮಲಗಿಕೊಳ್ಳುತ್ತಿದ್ದನಂತೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


