ಮಂಡ್ಯ: ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಗನ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಮಾಧುಸ್ವಾಮಿ, ಶಾಸಕರು ಯಾಕೆ ರಾಜೀನಾಮೆ ಕೊಡಬೇಕು.? ಅವರ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಅವರ ಮಗ ದುಡ್ಡು ತೆಗೆದುಕೊಂಡಿದ್ದಾನೆ ಮುಂದಿನ ಪರಿಣಾಮ ಎದುರಿಸುತ್ತಾನೆ ಎಂದರು.
ಮಂಡ್ಯದ ಹುಲಿಕೆರೆಯಲ್ಲಿ ಮಾತನಾಡಿದ ಅವರು, ಪುತ್ರನ ಹಣ ಸಿಕ್ಕ ಪ್ರಕರಣ ಕುರಿತು ನಾವು ಅದರ ಬಗ್ಗೆ ಕಮೆಂಟ್ ಮಾಡೊಕೆ ಅಗಲ್ಲ. ವಿರೂಪಾಕ್ಷಪ್ಪನ ಮಗ ಎಸಿಬಿಯಲ್ಲಿ ಒಬ್ಬ ಆಫೀಸರ್. ಅವನು ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡ್ತಾರೆ ಎಂದು ಪ್ರಶ್ನಿಸಿದರು.
ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು.? ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು.? ಇಂತಹ ಅಯೋಗ್ಯರು ಯಾರ್ ಯಾರು ಇದ್ದಾರೆ ಎಂದು ನಾವು ಹುಡುಕಿಕೊಂಡು ಕೂರೊಕೆ ಆಗುತ್ತಾ ಎಂದು ಕಿಡಿಕಾರಿದರು.
40% ದಂಧೆ ಮಾಡೊಕೆ ಅವರು ಯಾರು ಮಂತ್ರಿಯಲ್ಲ. ಆತ ಒಬ್ಬ ಸರ್ಕಾರಿ ಅಧಿಕಾರಿ, ಎಸಿಬಿಯಲ್ಲಿ ಇದ್ದವರು. ಶಾಸಕರಿಗೂ ಮುಖ್ಯಮಂತ್ರಿಗಳಿಗೂ ಇದರಲ್ಲಿ ಸಂಬಂಧವಿಲ್ಲ. ಕಾಂಗ್ರೆಸ್’ನವರಿಗೆ ಏನು ಇಲ್ಲ, ಏನಾದ್ರು ಸಿಕ್ಕಿದರೆ ದೊಡ್ಡದು ಮಾಡಿಕೊಂಡು ಹೋಗ್ತಾರೆ ಎಂದು ಗುಡುಗಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


