ಹಾಸನ: ಕುಮಾರಣ್ಣ ನನ್ನ ಹಿತೈಷಿ, ಯಾವಾಗಲೂ ನನ್ನ ಒಳಿತನ್ನೇ ಬಯಸುವಂತಹವರು. ಅವರು ಏನು ಹೇಳಿದರೂ ಆಶೀರ್ವಾದ ಅನ್ಕೊತೀನಿ ಎಂದು ಬಿಜೆಪಿ ಶಾಸಕ ಪ್ರೀತಂ ಗೌಡ ಹೇಳಿದ್ದಾರೆ.
ಅವನ್ಯಾವನೋ ಶಾಸಕ 50 ಸಾವಿರ ಲೀಡ್‌ನಿಂದ ಗೆಲ್ತೀನಿ ಅಂತ ಚಾಲೆಂಜ್ ಹಾಕ್ತಾನೆ ಎಂಬ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿಗೆ ನಯವಾಗಿಯೇ ತಿರುಗೇಟು ಕೊಟ್ಟ ಪ್ರೀತಂ ಗೌಡ, ಅವರು ವೈಯುಕ್ತಿಕವಾಗಿ ನನ್ನ ಬಗ್ಗೆ ಮಾತಾನಾಡಿದರೆ ಅವರು ಯಾವಾಗಲೂ ನನ್ನ ಹಿತೈಷಿಯೇ. ನನ್ನ ಬಗ್ಗೆ ವೈಯುಕ್ತಿಕವಾಗಿ ಮಾತನಾಡಿದರೆ ಅವರು ಪ್ರೀತಿಯಿಂದ ಮಾತನಾಡಿರುತ್ತಾರೆ ಎಂದರು.
ಅವರ ಪ್ರೀತಿಯನ್ನು ನಾನು ಆಶೀರ್ವಾದ ಎಂದು ತೆಗೆದುಕೊಂಡಿರುತ್ತೇನೆ. ಅವರ ಆಶೀರ್ವಾದ ಯಾವಾಗಲೂ ನನ್ನ ಮೇಲೆ ಇರುತ್ತದೆ. ಅವರು ಏನು ಬಯಸುತ್ತಾರೆ ಅದನ್ನು ಮಾಡುವುದಕ್ಕೆ ಅವರ ಒಬ್ಬ ಸಹೋದರನಾಗಿ ನಾನು ಹಾಸನದಲ್ಲಿ ಅವರ ಪರವಾಗಿ ಯೋಚನೆ ಮಾಡುತ್ತೇನೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


