ಬೆಳಗಾವಿ: ಕಾಂಗ್ರೆಸ್ ಪಕ್ಷದ ನಾಯಕರು ವಿರೂಪಾಕ್ಷಪ್ಪ ಮಾತ್ರವಲ್ಲ ಸಿದ್ದರಾಮಯ್ಯನವರು ಸಹ ನನ್ನ ಆಪ್ತರೇ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಿದರೆ ಇತ್ತ ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ಬೆಳಗಾವಿಗೆ ಆಗಮಿಸಿದ ಅವರು ಮಾಧ್ಯಮದವರು ಮಾಡಾಳ್ ವಿರೂಪಾಕ್ಷಪ್ಪನವರ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸಮಾಧಾನ ಚಿತ್ತದಿಂದ, ಶಾಂತರಾಗಿ ಉತ್ತರ ನೀಡಿದರು.ವಿರೂಪಾಕ್ಷಪ್ಪ ಮತ್ತು ಅವರ ಮಗನ ಮೇಲೆ ಸರ್ಕಾರವಲ್ಲ, ಲೋಕಾಯುಕ್ತ ಕ್ರಮ ಜರುಗಿಸುತ್ತದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷದ ನಾಯಕರು ವಿರೂಪಾಕ್ಷಪ್ಪ ನಿಮ್ಮ ಆಪ್ತರೆಂದು ಅರೋಪಿಸುತ್ತಿದ್ದಾರೆ ಅಂತ ಹೇಳಿದ್ದಕ್ಕೆ ಅವರು ವಿರೂಪಾಕ್ಷಪ್ಪ ಮಾತ್ರವಲ್ಲ ಸಿದ್ದರಾಮಯ್ಯನವರು ಸಹ ನನ್ನ ಆಪ್ತರೇ ಎಂದು ನಗುತ್ತಾ ಉತ್ತರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


