ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಲು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಗುತ್ತಿಗೆ ನೌಕರರಿಗೆ ಸಂಭಾವನೆಯನ್ನು ದಿನಾಂಕ 01-04-2023ರಿಂದ ಜಾರಿಗೆ ಬರುವಂತೆ ಶೇ.15ರಷ್ಟು ಹೆಚ್ಚಿಸಲಾಗಿದೆ. ಈ ಆದೇಶವು ಗುತ್ತಿಗೆ ನೌಕರರಿಗೆ ಮಾತ್ರವೇ ಅನ್ವಯವಾಗಲಿದೆ.ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವಿಟ್ ಮಾಡಿ ಮಾಹಿತಿ ನೀಡಿದ್ದಾರೆ.
ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಿಸಿ ನಮ್ಮ ಸರ್ಕಾರ ಆದೇಶ ಮಾಡಿದ್ದು, ಗುತ್ತಿಗೆ ನೌಕರರ ಬಹುದಿನದ ಬೇಡಿಕೆ ಈಡೇರಿಸಲಾಗಿದೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


