H3N2 ಸೋಂಕಿನ ಬಗ್ಗೆ ಗಾಬರಿ ಪಡಬೇಕಿಲ್ಲ. ಆದರೆ ಸೋಂಕಿನ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
H3N2 ಸೋಂಕಿನ ಭೀತಿ ಹಿನ್ನೆಲೆ ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸೋಂಕು ಬಗ್ಗೆ ಮಕ್ಕಳು ವೃದ್ದರು ಗರ್ಭಿಣಿಯರು ಎಚ್ಚರದಿಂದಿರಿ. ಶುಚಿತ್ವದ ಬಗ್ಗೆ ಹೆಚ್ಚಿನ ಗಮನ ನೀಡಿ. ವೈರಸ್ ಬಗ್ಗೆ ಯಾವುದೇ ಆತಂಕ ಬೇಡ. ಆದರೆ ವೈರಸ್ ಬಗ್ಗೆ ನಿರ್ಲಕ್ಷ್ಯಬೇಡ. ಜ್ವರಕ್ಕೆ ವ್ಯಾಕ್ಸಿನ್ ಪಡೆಯುವಂತೆ ಸೂಚನೆ ನೀಡಲಾಗಿದೆ ಎಂದರು.
ಹೆಚ್ 3 ಎನ್2 ಸೋಂಕು ಹೆಚ್ಚಳ ಹಿನ್ನೆಲೆ ಸಭೆ ನಡೆಸಿದ್ದೇವೆ. ಅನಗತ್ಯವಾಗಿ ಬಿಸಿಲಿನಲ್ಲಿ ಓಡಾಡಬೇಡಿ. ಬಿಸಿಲು ಮುಗಿಯುವವರೆಗೂ ಹೆಚ್ಚು ನೀರು ಸೇವಿಸಿ. ಮಜ್ಜಿಗೆ ತಂಪು ಪಾನೀಯ ಹೆಚ್ಚು ಸೇವಿಸಿ ಸೋಂಕು ಪರೀಕ್ಷೆಗೆ 25 ಕೇಂದ್ರಗಳನ್ನ ತೆರೆಯಲಾಗುತ್ತದೆ. ಐಸಿಯುನಲ್ಲಿ ಕೆಲಸ ಮಾಡುವವರಿಗೆ ಲಸಿಕೆ ನೀಡುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


