ಶೈಕ್ಷಣಿಕ ಹಿತದೃಷ್ಟಿಯಿಂದ ಸೆಮಿಸ್ಟರ್ ಪರೀಕ್ಷೆಗಳನ್ನು ಮತ್ತಷ್ಟು ತಡ ಮಾಡದೆ, ಈ ಕೂಡಲೇ ಮುಗಿಸಲು ತುಮಕೂರು ವಿಶ್ವವಿದ್ಯಾಲಯ ಕ್ರಮ ಕೈಗೊಳ್ಳಬೇಕೆಂದು AIDSO ತುಮಕೂರು ಜಿಲ್ಲಾ ಸಮಿತಿ ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾದ ಪ್ರಸನ್ನ ಕುಮಾರ್ ಕೆ. ಅವರ ಮೂಲಕ ಕುಲಪತಿಗಳಿಗೆ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಪ್ರಸ್ತುತ ಸೆಮಿಸ್ಟರ್ ತರಗತಿಗಳು ಆರಂಭವಾಗಿ 7 ತಿಂಗಳುಗಳು ಕಳೆದಿವೆ. ಆದರೂ ರಾಜ್ಯದ ಯಾವುದೇ ವಿಶ್ವವಿದ್ಯಾಲಯದಲ್ಲಿ ಈಗಾಗಲೇ ನಡೆಯಬೇಕಿದ್ದ ಸೆಮಿಸ್ಟರ್ ಪರೀಕ್ಷೆಗಳು ನಡೆದಿಲ್ಲ ಮತ್ತು ಹಲವು ವಿಶ್ವವಿದ್ಯಾಲಯಗಳು ಇನ್ನೂ ಪರೀಕ್ಷಾ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿಲ್ಲ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಸಮಿತಿ ಮನವಿಯಲ್ಲಿ ತಿಳಿಸಿದೆ.
ಇದು ಹೀಗೆಯೇ ಮುಂದುವರೆದರೆ, ಮುಂದಿನ ಶೈಕ್ಷಣಿಕ ವರ್ಷದ ಮೇಲೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಒಂದೆಡೆ, ಸ್ವಾಯತ್ತ ವಿಶ್ವವಿದ್ಯಾಲಯಗಳು ತಮ್ಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಗಿಸಿಕೊಂಡು ಮುಂದಿನ ಸೆಮಿಸ್ಟರ್ ಅನ್ನು ಆರಂಭಿಸಿದ್ದಾರೆ. ಇನ್ನೊಂದೆಡೆ ರಾಜ್ಯದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೆಮಿಸ್ಟರ್ ತರಗತಿಗಳು ಮುಗಿಸಿಕೊಂಡು ಒಂದು ತಿಂಗಳಿನಿಂದ ಪರೀಕ್ಷೆಗಾಗಿ ಕಾಯುತ್ತಾ ಕುಳಿತಿದ್ದಾರೆ. ಇದು ಅಸಮತೋಲನವನ್ನು ಸೃಷ್ಟಿ ಮಾಡುತ್ತಿದೆ. ಇದರೊಂದಿಗೆ, ಚುನಾವಣೆ ಬರುವ ಹಿನ್ನೆಲೆಯಲ್ಲಿ ಏಪ್ರಿಲ್ ಮಧ್ಯ ಭಾಗದ ನಂತರ ಯಾವುದೇ ಪರೀಕ್ಷೆಗಳನ್ನು ನಡೆಸಬಾರದು ಎಂದು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಂಘಟನೆ ಆತಂಕ ವ್ಯಕ್ತಪಡಿಸಿದೆ.
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಈಗಾಗಲೇ ಪರೀಕ್ಷಾ ವೇಳಾ ಪಟ್ಟಿಯ ಕರಡನ್ನು ಹೊರಡಿಸಲಾಗಿದ್ದು, ಆದಷ್ಟು ಬೇಗ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಮತ್ತು ಚುನಾವಣೆ ಬರುವ ಹಿನ್ನೆಲೆಯಲ್ಲಿ ಏಪ್ರಿಲ್ ಮಧ್ಯ ಭಾಗದ ಒಳಗೆ ಪರೀಕ್ಷೆಗಳು ನಡೆಯುವಂತೆ ಕ್ರಮ ವಹಿಸಬೇಕು ಮತ್ತು ಅಂತೆಯೇ ಸಂಬಂಧಪಟ್ಟ ಕುಲಪತಿಗಳು ನಿರ್ದೇಶನವನ್ನು ನೀಡಬೇಕು ಎಂದು ಜಿಲ್ಲೆಯ ವಿದ್ಯಾರ್ಥಿಗಳ ಪರವಾಗಿ AIDSO ಜಿಲ್ಲಾ ಸಮಿತಿಯು ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾದ ಪ್ರಸನ್ನ ಕುಮಾರ್.ಕೆ ಅವರ ಮೂಲಕ ಕುಲಪತಿಗಳಿಗೆ ಮನವಿ ಪತ್ರ ಸಲ್ಲಿಸುವ ಮುಲಕ ಒತ್ತಾಯಿಸಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA