ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯು ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಹಿಳೆಯರಿಗೆ ಎಲ್ಲ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲು ನಿರ್ಧರಿಸಿದೆ.
ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಎಲ್ಲಾ ಮಹಿಳಾ ಪ್ರಯಾಣಿಕರಿಗೂ ಒಂದು ದಿನ ಉಚಿತ ಸೇವೆ ನೀಡಲು ಸರ್ಕಾರ ಅನುಮೋದನೆ ನೀಡಿದೆ.
ನಾಳೆ ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಬಿಎಂಟಿಸಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಮೂಲಕ ಮಹಿಳಾ ದಿನಾಚರಣೆಗೆ ವಿಶೇಷ ಕೊಡುಗೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


