ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100 ನೇ ಜನೌಷಧಿ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ. 240 ವಾರ್ಡುಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ. ಸುಮಾರು 19 ಪಿ.ಹೆಚ್.ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲೆಡೆ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು ಸಂಚಾರಿ ಆಸ್ಪತ್ರೆಯನ್ನೂ ಹಾಗೂ ಡಯಾಲಿಸಿಸ್ ಕೇಂದ್ರವನ್ನೂ ಉದ್ಘಾಟಿಸಲಾಗಿದ್ದು, ರೋಗಿಗಳ ಮುಖದಲ್ಲಿ ಮಂದಹಾಸ ನೋಡಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


