ಬೆಂಗಳೂರು: ರಾಜ್ಯದಲ್ಲಿ ಫಾಕ್ಸ್‌ಕಾನ್ ಕಂಪನಿ ಹೂಡಿಕೆ ಮಾಡುವುದು ನಿಶ್ಚಿತ. ಎಷ್ಟು ಪ್ರಮಾಣದ ಹೂಡಿಕೆ ಆಗಲಿದೆ ಎಂಬುದು ಇನ್ನಷ್ಟೇ ನಿರ್ಧಾರವಾಗಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಕರ್ನಾಟಕ ಘಟಕದ ವಾರ್ಷಿಕ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ‘ಫಾಕ್ಸ್‌ಕಾನ್ ಕಂಪನಿಯ ಪ್ರಮುಖರ ಜತೆ ಶುಕ್ರವಾರ ಸುದೀರ್ಘ ಚರ್ಚೆ ನಡೆದಿದೆ.
ರಾಜ್ಯದಲ್ಲಿ ಹೂಡಿಕೆ ಮಾಡಲು ಕಂಪನಿ ಸಂಪೂರ್ಣ ಒಲವು ತೋರಿದೆ. ಈವರೆಗಿನ ಬೆಳವಣಿಗೆಗಳು ಏನೇ ಇರಬಹುದು. ಆದರೆ, ಫಾಕ್ಸ್‌ಕಾನ್ ಇಲ್ಲಿ ಹೂಡಿಕೆ ಮಾಡಲಿದೆ ಎಂಬುದರಲ್ಲಿ ಅನುಮಾನವಿಲ್ಲ’ ಎಂದರು.
ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಅತ್ಯಂತ ವೇಗವಾಗಿ ನಡೆಯುತ್ತಿದೆ. ಮುಂದಿನ ಕೆಲವೇ ವರ್ಷಗಳಲ್ಲಿ 5,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಲಿದೆ. ಎಲ್ಲ ಪ್ರಮುಖ ನಗರಗಳಿಗೂ ಹೈಸ್ಪೀಡ್ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಜಾರಿಗೆ ಬರಲಿದೆ. ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ವೇಗವಾಗಿ ನಡೆಯುತ್ತಿದೆ. ಇವೆಲ್ಲವೂ ಕರ್ನಾಟಕವನ್ನು ಹೂಡಿಕೆದಾರರ ಆಸಕ್ತಿಯ ತಾಣವಾಗಿಸಿವೆ ಎಂದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಸಿಐಐ ದಕ್ಷಿಣ ವಲಯ ಘಟಕದ ಅಧ್ಯಕ್ಷೆ ಸುಚಿತ್ರಾ ಕೆ. ಎಲ್ಲಾ, ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಅರ್ಜುನ್ ಎಂ. ರಂಗ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


