ತಾವು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ ಹಬ್ಬಿದ್ಧ ವದಂತಿಗೆ ಸಚಿವ ನಾರಾಯಣಗೌಡ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ನಾರಾಯಣಗೌಡ, ನಾನು ಬಿಜೆಪಿಯಲ್ಲೇ ಇದ್ದೇನೆ ಇಲ್ಲೇ ಇರುತ್ತೇನೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ನಿನ್ನೆ ನಡೆದ ಗಲಾಟೆಗೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಅವರನ್ನೇ ಕೇಳಿಕೊಳ್ಳಿ. ನಮ್ಮ ಪಕ್ಷ ಮತ್ತು ಪ್ರಧಾನಿ ಮೋದಿ ಬಗ್ಗೆ ಕೇಳಿ ಹೇಳುತ್ತೇನೆ ಎಂದರು.
ಸಚಿವ ನಾರಾಯಣಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹರಡಿತ್ತು. ಇನ್ನು ನಾರಾಯಣಗೌಡರು ಕಾಂಗ್ರೆಸ್ ಸೇರ್ಪಡೆಗೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


