ಬೆಂಗಳೂರು: ಮುಂದಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು, ಪುರುಷರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗ ಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮತ್ತು “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ” ಮಾಡಿ ಮಾತನಾಡಿದರು.
ತಾಯಿಯೊಂದಿಗೆ ಜನ್ಮಪೂರ್ವದ ಸಂಬಂಧವಿದ್ದು, ಇದೊಂದು ಪವಿತ್ರ ಸಂಬಂಧ. ಮನುಕುಲದ ಮುಂದುವರಿಕೆ ನಿರಂತರವಾಗಿ ತಾಯಿಂದಿರು ಮಾಡಿದ್ದಾರೆ. ನಮ್ಮ ತಾಯಿ, ಮಕ್ಕಳು, ಪತ್ನಿಯಿಂದ ಸದಾ ಸೇವೆ ಪಡೆಯುವುದು ಪುರುಷ. ಮಹಿಳೆಗೆ ತೊಂದರೆಯಾದರೆ ಅದು ಗಂಡು ಮಕ್ಕಳಿಂದ , ಹೀಗಾಗಿ ಗಂಡು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.
ಜಗತ್ತಿನ ಎಲ್ಲಾ ದೇಶಗಳಲ್ಲಿ ಮಹಿಳೆಯರನ್ನು ಒಗ್ಗೂಡಿಸಿ ಅವರ ಸುರಕ್ಷತೆ ಹಾಗೂ ಆರ್ಥಿಕ ಸ್ವಾತಂತ್ರ್ಯ ನೀಡಿ ಸಬಲರನ್ನಾಗಿ ಮಾಡಲು ಸಂಯುಕ್ತ ರಾಷ್ಟ್ರ ತೀರ್ಮಾನ ಮಾಡಿ ಈ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


