ಚಿಕ್ಕನಾಯಕನಹಳ್ಳಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಶಿವರಾಜ್ ಎಂಬವರು ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಇಲಾಖೆಯಲ್ಲಿ ಮಾಸಿಕ ಬಾಡಿಗೆ ಆಧಾರದಲ್ಲಿ ಕಾರು ಓಡಿಸಿದ್ದ ಚಾಲಕ ನರೇಂದ್ರ ಎಂಬವರ ಬಾಡಿಗೆ ಬಿಲ್ 34,800 ರೂಪಾಯಿ ನೀಡಲು ಶಿವರಾಜ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ಶಿವರಾಜ್ ನ ಲಂಚಬಾಕತನದಿಂದ ಬೇಸತ್ತ ನರೇಂದ್ರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಡಿವೈಎಸ್ ಪಿ ಜಿ.ಮಂಜುನಾಥ್, ಹರೀಶ್ ಮಾರ್ಗದರ್ಶನದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA