ಮಂಡ್ಯ: ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಜಿಲ್ಲೆಯ ಬೆಂಗಳೂರು—ಮೈಸೂರು ರಾಷ್ಟ್ರೀಯ ಹೆದ್ದಾರಿಯ ದಶಪಥ ರಸ್ತೆಯನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರ ಭದ್ರತೆಯ ದೃಷ್ಟಿಯಿಂದ ಕಾರ್ಯಕ್ರಮದಲ್ಲಿ ಡ್ರೋಣ್ ಕ್ಯಾಮರ ಬಳಸಿ ಕಾರ್ಯಕ್ರಮವನ್ನು ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲ ಕೃಷ್ಣ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮ ನಡೆಯುವ ಪ್ರದೇಶದಿಂದ 15 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋಣ್ ಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚನೆ ನೀಡಲಾಗಿದ್ದು, ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯ ಅಗತ್ಯ ಕ್ರಮವಹಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
ವರದಿ: ಮಂಜು ಶ್ರವಣೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


