ಸರಗೂರು: ಬದುಕಿನಲ್ಲಿ ಆಸ್ತಿ, ಅಂತಸ್ತು ಮುಖ್ಯ ಅಲ್ಲ. ಪ್ರೀತಿ — ವಿಶ್ವಾಸವೇ ಮುಖ್ಯ. ಬಡತನ — ಸಿರಿತನ ಶಾಶ್ವತವಲ್ಲ. ಪ್ರೀತಿ–ವಿಶ್ವಾಸವಿಲ್ಲದಿದ್ದರೆ ಬದುಕಿಗೆ ಅರ್ಥವಿಲ್ಲ ಎಂದು ಗುರುಮಲ್ಲೇಶ್ವರ ದಾಸೋಹ ಮಹಾಸಂಸ್ಥಾನ ಮಠಾಧ್ಯಕ್ಷರು ಶ್ರೀ ಮಹಾಂತಸ್ವಾಮಿ ತಿಳಿಸಿದರು .
ಸರಗೂರು ತಾಲ್ಲೂಕಿನ ಪಟ್ಟಣದ ಪಡುವಲು ವಿರಕ್ತ ಮಠದಲ್ಲಿ 8 ನೇ ವರ್ಷದ ಶ್ರೀ ಕಾಳ ಒಡೆಯ ಗುರುಗಳ ಆರಾಧನೆ ಮಹೋತ್ಸವ ಮತ್ತು ವೀರಶೈವ ಲಿಂಗಾಯತ ವಧು–ವರರ ಉಚಿತ ಸಾಮೂಹಿಕ ವಿವಾಹ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು.
ಗಂಡ — ಹೆಂಡತಿ ಸದಾ ಪರಸ್ಪರ ಅರ್ಥೈಸಿಕೊಂಡು ಪ್ರೀತಿ–ವಿಶ್ವಾಸದಿಂದ ಸಾರ್ಥಕ ಜೀವನ ನಡೆಸಬೇಕು ಎಂದು ನೂತನ ದಂಪತಿಗಳಿಗೆ ಕಿವಿಮಾತು ಹೇಳಿದ ಅವರು, ಸತ್ಯ, ಧರ್ಮ, ನ್ಯಾಯ ಮತ್ತು ನೀತಿಗೆ ಪ್ರಸಿದ್ಧವಾದುದು. ಸಂಸಾರ ಸಾಗರಕ್ಕೆ ಧುಮುಕಿದ ನವದಂಪತಿಗಳು ಶ್ರೀ ಸ್ವಾಮಿಯ ಅನುಗ್ರಹದಿಂದ ಸುಖ – ಶಾಂತಿ ಮತ್ತು ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸಿದರು.
ಸಮಾರಂಭ ಬಳಿಕ ಕಾಳ ಒಡೆಯ ಗುರುಗಳ ಮಹಾವಿದ್ಯಾಪೀಠ ಪಡುವಲು ವಿರಕ್ತ ಮಠದ ಶ್ರೀ ಮಹದೇವಸ್ವಾಮಿ ಸ್ವಾಮಿಜಿ ಮಾತನಾಡಿ, ಸಾಮೂಹಿಕ ವಿವಾಹ ಸರಳ ಜೀವನಕ್ಕೆ ನಾಂದಿಯಾಗಬೇಕು. ಮದುವೆಯ ಹೆಸರಿನಲ್ಲಿ ದುಂದು ವೆಚ್ಚ ಮಾಡಬಾರದು. ವಿವಾಹಕ್ಕಾಗಿ ಮಾಡುವ ದುಂದು ವೆಚ್ಚ, ವರದಕ್ಷಿಣೆ, ಜೀತಪದ್ಧತಿ ಮೊದಲಾದ ಸಮಸ್ಯೆಗಳನ್ನು ನಿವಾರಿಸಲಿಕ್ಕಾಗಿ ಸಾಮೂಹಿಕ ವಿವಾಹ ಯೋಜನೆಯನ್ನು ಧರ್ಮಸ್ಥಳದಲ್ಲಿ ಆರಂಭಿಸಲಾಗಿದೆ. ಜೋಡಿಗಳು ಅಂತರ್ಜಾತೀಯ ವಿವಾಹವಾದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ವಿರಕ್ತ ಮಠದಲ್ಲಿ ಮದುವೆಯಾದವರು ಪರಸ್ಪರ ಅರಿತುಕೊಂಡು ಶಾಂತಿ –ಸಹನೆ ಮತ್ತು ಪ್ರೀತಿ–ವಿಶ್ವಾಸದಿಂದ ನೆಮ್ಮದಿಯ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ಮದುವೆಯ ಪಾವಿತ್ರ್ಯ ಮತ್ತು ಗಂಭೀರತೆಯನ್ನು ಅರ್ಥಮಾಡಿಕೊಂಡು ಸಾರ್ಥಕ ಜೀವನ ನಡೆಸಿ ಎಂದು ನವವಧುವರಿಗೆ ಶುಭ ಹಾರೈಸಿದರು.
ಗಮನ ಸೆಳೆದ 8ನೇ ವರ್ಷದ ಉಚಿತ ಸಾಮೂಹಿಕ ವಿವಾಹ:
ಪಟ್ಟಣದ ಪವಿತ್ರ ವಿರಕ್ತ ಮಠದಲ್ಲಿ 8ನೇ ವರ್ಷದ ಉಚಿತ ಸಾಮೂಹಿಕವು ಅದ್ಧೂರಿಯಿಂದ ನಡೆದಿದೆ. ಸಂಜೆ ಗಂಟೆ 7 ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಶ್ರೀ ಕಾಳ ಒಡೆಯ ಗುರುಗಳ ಗದ್ದಿಗೆ ಮತ್ತು ವೀರಭದ್ರೇಶ್ವರ ಸ್ವಾಮಿ ಗೆ ರುದ್ರಾಭಿಷೇಕ ಬಿಲ್ವಾರ್ಚನೆ ಮಂಗಳಾರತಿ ನಡಿಸಿ. 2 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬೆಳಗ್ಗೆ ಮಠದಲ್ಲಿ ಸ್ವಾಮೀಜಿಗಳು ವಧುವಿಗೆ ಸೀರೆ ಮತ್ತು ರವಕೆ ಹಾಗೂ ವರನಿಗೆ ಧೋತಿ, ಶಾಲು ವಿತರಿಸಲಾಗಿತ್ತು.ಸಂಜೆ 5 ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ಆಗಮಿಸಿದ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ವೀರಭದ್ರೇಶ್ವರ ದೇವಾಲಯ ಬಳಿ ಮದುವೆ ಮಂಟಪಕ್ಕೆ ಆಗಮಿಸಿದರು. ಅಲ್ಲಿ ಸ್ವಾಮೀಜಿಯವರು ಮತ್ತು ಗಣ್ಯ ಅತಿಥಿಗಳು ಮಂಗಳಸೂತ್ರ ವಿತರಿಸಿ ಶುಭ ಹಾರೈಸಿದರು. ಬೆಳಗ್ಗೆ 8:00ರಿಂದ 8:25ವರೆಗೆ ಗೋಧೂಳಿ ಲಗ್ನದ ಸುಮುಹೂರ್ತದಲ್ಲಿ ವೇದಘೋಷ, ಮಂತ್ರ ಪಠಣ, ಮಂಗಳವಾದ್ಯಗಳೊಂದಿಗೆ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಿ ಮಂತ್ರಾಕ್ಷತೆ, ಹಾರ ವಿನಿಮಯ ಹಾಗೂ ಮಾಂಗಲ್ಯ ಧಾರಣೆಯೊಂದಿಗೆ ಸಾಮೂಹಿಕ ವಿವಾಹ ನಡಿಸಲಾಯಿತು.
ನೂತನ ದಂಪತಿಗಳಿಂದ ಪ್ರತಿಜ್ಞಾ ವಿಧಿ ಬೋಧನೆ:
ವಿರಕ್ತ ಮಠದಲ್ಲಿ ಮಂಗಲ ಮುಹೂರ್ತದಲ್ಲಿ ವಧು ವರರಾಗಿ ಪವಿತ್ರ ಬಾಂಧವ್ಯವನ್ನು ಹೊಂದಿರುವ ನಾವು ಮುಂದೆ ಜೀವನದುದ್ದಕ್ಕೂ ಧರ್ಮ, ಅರ್ಥ, ಕಾಮದಲ್ಲಿ ಸಹಚರರಾಗಿ, ಪರಸ್ಪರ ಪ್ರೀತಿ ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೇ ಹಾಗೂ ಯಾವುದೇ ದುರಾಭ್ಯಾಸಗಳಿಗೂ ತುತ್ತಾಗದೆ ಬದುಕುತ್ತೇವೆ ಎಂದು ಶ್ರೀ ಕಾಳ ಒಡೆಯ ಗುರುಗಳ ಗದ್ದಿಗೆ ಮತ್ತು ವೀರಭದ್ರೇಶ್ವರಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಪೂಜ್ಯ ಸ್ವಾಮೀಜಿಯವರ ಸಮಕ್ಷಮದಲ್ಲಿ ಪ್ರಮಾಣವಚನ ಬದ್ಧರಾಗುತ್ತಿದ್ದೇವೆ ಎಂದು ನವ ವಧುವರರು ಪ್ರತಿಜ್ಞೆ ಮಾಡಿದರು. ಬಳಿಕ ನೂತನ ದಂಪತಿಗಳು ದೇವಸ್ಥಾನಕ್ಕೆ ಹೋಗಿ ದೇವರದರ್ಶನ ಪಡೆದರು. ಭರತೇಶ ಜೋಯಿಸ್ ಜ್ಯೋತಿಷ್ಯ.ಎಸ್ ಎನ್ ಮಹಾದೇವಪ್ಪ.ಬಸವರಾಜು ಗುಂಜಿಗಾಯಿ ಇವರನ್ನು ಸನ್ಮಾನಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಸಿದ್ಧಮಲ್ಲೇಶ್ವರಪಟ್ಟದ ಮಠ ಶ್ರೀ ಚನ್ನಬಸವ ಸ್ವಾಮೀಜಿ, ಶ್ರೀ ಗುರುಮಲ್ಲೇಶ್ವರ ಪಟ್ಟದಮಠ ಶ್ರೀ ಡಾ ಷಡಕ್ಷರಿ ಸ್ವಾಮೀಜಿ, ಕಿರಿಯ ಶ್ರೀಗಳು ಶ್ರೀ ದೇಗುಲ ಮಠದ ಕನಕಪುರ ಚನ್ನಬಸವ ಸ್ವಾಮೀಜಿ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರು ಡಿ ಜಿ ಶಿವರಾಜು, ಮೊತ್ತ ಬಸವರಾಜಪ್ಪ, ಬಿಜೆಪಿ ಮುಖಂಡರು ಡಾ ಹೆಚ್ ವಿ ಕೃಷ್ಣಸ್ವಾಮಿ, ಅಪ್ಪಣ್ಣ, ಬಸವೇಶ್ವರ ಮಠದ ಚಂದ್ರಶೇಖರ ಸ್ವಾಮೀಜಿ, ಚಂದ್ರಮೌಳೇಶ್ವರ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿ, ದಾಸೋಹಮಠದ ನಂದೀಶ ಸ್ವಾಮೀಜಿ, ಶಾಸಕ ಅನಿಲ್ ಚಿಕ್ಕಮಾದು ಅವರ ತಾಯಿ ನಾಗಮ್ಮ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ಸದಸ್ಯ ಚೆಲುವ ಕೃಷ್ಣ, ವೀರಶೈವ ಸಹಕಾರ ಸಂಘ ಅಧ್ಯಕ್ಷ ಗಣಪತಿ, ವೀರಶೈವ ಸಮಾನ ಮನಸ್ಕ ಗೆಳೆಯರ ಬಳಗದ ಅಧ್ಯಕ್ಷ ಆಯಿಲ್ ಶ್ರೀಕಂಠಸ್ವಾಮಿ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಸಿ ಕೆ ಗಿರೀಶ್, ಶಿವಪುರ ಪ್ರಕಾಶ್,ಶ್ರೀಕಂಠಸ್ವಾಮಿ, ರಾಜಶೇಖರ್, ಗಿರೀಶ್ ಮೂರ್ತಿ,ಗಿರಿಕುಮಾರ್, ಇನ್ನೂ ಮುಖಂಡರು ಭಾಗಿಯಾಗಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


