ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿರೋ ಬೆನ್ನಲ್ಲೆ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಬಗ್ಗೆ ಮಹತ್ವದ ತೀರ್ಮಾನವಾಗಲಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ನೀಡುವ ಬಗ್ಗೆ ನಾಳೆ ಸುಮಲತಾ ನಿವಾಸದಲ್ಲೇ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಸುಮಲತಾ ಅಂಬರೀಷ್ ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ.
ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಬಗ್ಗೆ ಆಪ್ತರೊಳಗಡೆ ಒಮ್ಮತ ತೀರ್ಮಾನ ಸಾಧ್ಯತೆಯಿದೆ. ಮಂಡ್ಯದ ಸುಮಲತಾ ತಮ್ಮ ನಿವಾಸದಲ್ಲೇ ಅಧಿಕೃತವಾಗಿ ಬಿಜೆಪಿ ಸೇರುವ ಬಗ್ಗೆ ಘೋಷಣೆ ಮಾಡಲಿದ್ದಾರೆ. ಮಂಡ್ಯ ಹಾಗೂ ಬೆಂಗಳೂರಿನ ಆಪ್ತರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಂಡ ಬಗ್ಗೆ ಮಾಹಿತಿ ಬಹಿರಂಗವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


