ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ – 2023 ರ ಪೂರ್ವ ತಯಾರಿ ಪರಿವೀಕ್ಷಣೆ ನಡೆಸಲು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದಿಳಿದಿದ್ದಾರೆ.
ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಜೀವ್ ಕುಮಾರ್ ಅವರ ತಂಡದಲ್ಲಿ ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳು ಸೇರಿದಂತೆ ಆಯೋಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿದ್ದಾರೆ.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ , ಚುನಾವಣಾ ಆಯುಕ್ತರುಗಳಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರುಗಳನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಚುನಾವಣಾಧಿಕಾರಿಗಳಾಗಿರುವ ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ, ಡಿಜಿಪಿ ಮತ್ತು ಐಜಿ ಪ್ರವೀಣ್ ಸೂದ್, ಕರ್ನಾಟಕ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶಕುಮಾರ್, ರಾಜೇಂದ್ರ ಚೋಳನ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಲತಾ ಹಾಗೂ ಇತರರು ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


