ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಬಾವಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಬೆಳಗಾವಿ ವಿಭಾಗದಿಂದ 2019-20 ನೇ ಸಾಲಿನ ನಬಾರ್ಡ್ ಆರ್.ಐ.ಡಿ.ಎಫ್ 25ನೇ ಯೋಜನೆಯಡಿ ನಿರ್ಮಿಸಲಾದ ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ “ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇತರ ಮೂಲಸೌಲಭ್ಯಗಳ ಜೊತೆಗೆ ಶೈಕ್ಷಣಿಕ ಅಭಿವೃದ್ಧಿಗೂ ಸಾಕಷ್ಟು ಒತ್ತು ನೀಡಲಾಗಿದೆ. ಗ್ರಾಮಿಣ ಭಾಗದ ಅನೇಕ ಶಾಲೆಗಳನ್ನು ಸ್ಮಾರ್ಟ್ ಆಗಿ ಉನ್ನತೀಕರಿಸಿದ್ದು ಹಲವಾರು ಗ್ರಾಮೀಣ ವಿದ್ಯಾರ್ಥಿಗಳಿಗೆ ಪಟ್ಟಣ, ನಗರಗಳಲ್ಲಿ ಲಭಿಸುವ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ” ಎಂದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, “ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಮಾರ್ಗದರ್ಶನದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರಾದ್ಯಂತ ಕೈಗೊಳ್ಳಲಾಗುತ್ತಿದ್ದು ಇನ್ನೂ ಹೆಚ್ಚಿನ ಅಭಿವೃದ್ಧಿಯ ಸಂಕಲ್ಪ ಸಾಕಾರವಾಗಲು ಜನತೆ ಕೂಡ ಕೈಜೋಡಿಸಬೇಕು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


