ಮಾಜಿ ಶಾಸಕ ಹಾಗೂ ಕಾಂಗ್ರೆಸ ಮುಖಂಡ ಫಿರೋಜ್ ಶೆಠ ಮಾಧ್ಯಮಗಳೊಂದಿಗೆ ಮಾತನಾಡಿ ಬೆಳಗಾವಿ ನಗರಕ್ಕೆ ನರೇಂದ್ರ ಮೋದಿ ಭೇಟಿಯಿಂದ ಬೆಳಗಾವಿ ರಾಜಕಾರಣದಲ್ಲಿ ಏನು ಬದಲಾವಣೆಯಾಗುವುದಿಲ್ಲ. ಜನ ಅಭಿವೃದ್ಧಿ ಕಾರ್ಯಕ್ರಮಗಳತ್ತ ಒಲವು ನೀಡುತ್ತಿದ್ದಾರೆ. ನಾನು ಹತ್ತು ವರ್ಷಗಳ ಕಾಲ ಅವಧಿಯಲ್ಲಿ ಮಾಡಿರುವಂತ ಅಭಿವೃದ್ಧಿ ಕಾರ್ಯಕ್ರಮಗಳಿಂದ ಜನರ ಮನಸ್ಸಿನಲ್ಲಿ ಮತ್ತು ಜನರ ಹೃದಯದಲ್ಲಿ ನಾನಿದ್ದೇನೆ ಎಂದರು.
ಭಾರತೀಯ ಜನತಾ ಪಕ್ಷ ಸುಳ್ಳಿನ ಪಕ್ಷ ಇದು ಜನರಿಗೆ ಮೋಸ ಮಾಡುವಂತ ಪಕ್ಷ. ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಇವೆಲ್ಲವೂ ಜನಸಾಮಾನ್ಯರ ಕಷ್ಟಕ್ಕೆ ಕಾರಣವಾಗಿವೆ. ಅದರಿಂದಾಗಿ ಜನ ಬಿಜೆಪಿ ಸರ್ಕಾರ ಆಡಳಿತ ದಿಂದ ಕಂಗಟ್ಟಿ ಹೋಗಿದ್ದಾರೆ ಎಂದು ಫಿರೋಜ್ ಶೆಠ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


