ಬೆಳಗಾವಿ: ನಗರದಲ್ಲಿ ವಿವಿಧ ಕಡೆಗಳಲ್ಲಿ ಇಂದು ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು, ಸುಮಾರು 3 ಕೋಟಿಗೂ ಹೆಚ್ಚು ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ಅಶೋಕ ನಗರದಲ್ಲಿ ಸುಮಾರು 27 ಲಕ್ಷ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ, ಅಮನ ನಗರ ಮತ್ತು ಮಾರುತಿ ನಗರದಲ್ಲಿ
2.5 ಕೋಟಿ ವೆಚ್ಚದಲ್ಲಿ ಚರಂಡಿ ಮತ್ತು ರಸ್ತೆ ಕಾಮಗಾರಿಗೆ ಚಾಲನೆ, ಎಸ್ ಮೋಟರ್ಸ ಹತ್ತಿರ 50 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಕಾಮಗಾರಿಗೆ ಚಾಲನೆ ನೀಡವ ವೇಳೆ ನಿವಾಸಗಳಿಂದ ಶಾಸಕ ಅನಿಲ ಬೆನಕೆ ಅವರಿಗೆ ಸನ್ಮಾನಿಸಲಾಯಿತು.
ಶಾಸಕರು ಹೊದಲೆಲ್ಲ ಸ್ಥಳೀಯ ನಿವಾಸಿಗಳುನೀರಿನ ಸಮಸ್ಯೆ, ಕಸ ವಿಲೇವಾರಿ ಸಮಸ್ಯೆಡ್ರೈನೆಜ ಸಮಸ್ಯೆ ಬಗ್ಗೆ ಶಾಸಕರಿಗೆ ಹೇಳಿಕೊಂಡರು. ಈ ವೇಳೆ ಶಾಸಕ ಅನಿಲ ಬೆನಕೆ ಅವರು, ಸ್ಥಳದಲ್ಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಗೆ ಸ್ಪಂದಿಸುವಂತರ ಸೂಚನೆ ನೀಡಿದರು.
ಕಾಮಗಾರಿಗೆ ಚಾಲನೆ ನೀಡದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಾಸಕ ಅನಿಲ ಬೆನಕೆ ಅವರು, ಅಶೋಕ ನಗರ, ಮಾರುತಿ ನಗರ, ಅಮನ ನಗರ ಹಾಗೂ ಎಸ್ ಮೋಟರ್ಸ್ ಬಳಿ ಸುಮಾರು 3 ಕೋಟಿಗೂ ಅಧಿಕ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಕಾಮಗಾರಿಯಲ್ಲಿ ಏನೆ ಸಮಸ್ಯೆಇದ್ದರುಸ್ಥಳೀಯರುಕೂಡಿ ಬಗೆಹರಿಸಿಕೊಳ್ಳಬೇಕು. ಚಾಲನೆ ನೀಡಿದ ಕಾಮಗಾರಿ 10 ದಿನಗಳಲ್ಲಿ ಮುಗಿಸುವಂತೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


