ಬೆಂಗಳೂರು–ಮೈಸೂರು ದಶಪಥ ಎಕ್ಸ್ ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ದ ಬೆನ್ನಲ್ಲೇ ದಶಪಥ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಮೋದಿ ಆಗಮನದ ಹಿನ್ನಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ವರೆಗೆ ಸಂಚಾರ ನಿರ್ಬಂಧಕ್ಕೆ ಆದೇಶ ನೀಡಲಾಗಿತ್ತು. ಆದರೆ ಮೋದಿ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಬೆನ್ನಲ್ಲೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೀಗಾಗಿ ಇಂದು ಬೆಳಗ್ಗೆ ಅಗತ್ಯಸೇವೆ ಮತ್ತು ಹಾಲಿನ ವಾಹನಗಳಿಗೆ ಮಾತ್ರ ಬೆಳಗ್ಗೆ 9 ಗಂಟೆಯವರೆಗೆ ಸವೀರ್‍ಸ್ ರಸ್ತೆಯಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


