ಬಾಗಲಕೋಟೆ: ನರೇಂದ್ರ ಮೋದಿಜಿ ಮುಂದೆ ರಾಹುಲ್ ಗಾಂಧಿ ಸಮಾ ಆಗಲು ಸಾಧ್ಯನಾ? ಎಲ್ಲಿಯಾ ನರೇಂದ್ರ ಮೋದಿ, ಎಲ್ಲಿಯ ರಾಹುಲ್ ಗಾಂಧಿ. ? ಎಂದು ಬಿ.ಎಸ್.ಯಡಿಯೂರಪ್ಪ ಪ್ರಶಿಸಿದ್ದಾರೆ.
ಈ ಕುರಿತು ಬಾಗಲಕೋಟೆಯಲ್ಲಿ ಮಂಗಳವಾರ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸೋತು ವಿಸರ್ಜನೆ ಹಂತಕ್ಕೆ ಬಂದಿದೆ.ಭಾರತ ಭವಿಷ್ಯದಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ನಿಮ್ಮ ನಾಯಕರು ಯಾರಿದ್ದಾರೆ.? ನೀವು ತಬ್ಬಲಿ ಆಗಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.
ತಬ್ಬಲಿಯಾಗಿರುವ ಕಾಂಗ್ರೆಸ್ ಪಕ್ಷದವರು ನರೇಂದ್ರ ಮೋದಿಯವರಿಗೆ ಹೇಗೆ ಸಮ ಎಂದರಲ್ಲದೆ, ಮೂರು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಕರ್ನಾಟಕದಲ್ಲಿ ಪಕ್ಷವನ್ನ ಸಂಘಟಿಸಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಮೋದಿ ಅವರಿಗೆ ಸಾಟಿ ಆಗುತ್ತೀರೇನು.? ಮೂರು ರಾಜ್ಯಗಳಲ್ಲಿ ದೂಳಿಪಟ ಆದ್ರೂ ಬುದ್ದಿ ಕಲಿಯಲಿಲ್ಲ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ನಿಶ್ಚಿತ. ನನಗೆ 81 ವರ್ಷಕ್ಕೆ ಕಾಲಿಟ್ಟಿದ್ದೇನೆ, ದೇವರು ಆರೋಗ್ಯ ಕೊಟ್ಟರೆ ಈ ಸಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಚುನಾವಣೆ ಸ್ವರ್ಧೆ ಮಾಡಲ್ಲ ಎಂದಿದ್ದ ನನ್ನ ನಿರ್ಧಾರ. ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವುದು ನೂರಕ್ಕೆ ನೂರು ಸತ್ಯ. ಕೇಂದ್ರದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕಿದೆ. ರಾಜ್ಯದಲ್ಲಿ ಮತ್ತೆ ಲೋಕಸಭೆಯಲ್ಲಿ 25 ಸ್ಥಾನ ಗೆಲ್ಲಬೇಕು, ಅದಕ್ಕಾಗಿ ನಾನು ಪ್ರಯತ್ನ ಮಾಡುತ್ತಿದ್ದೇನೆ. ಕಾಂಗ್ರೆಸ್ ಮಾಡಿದ ಸಾಧನೆ ಏನು.? ಎಂದು ಪ್ರಶ್ನಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


