2023 /24ರ ಸಾಲಿನ ಬೆಳಗಾವಿ ಮಹಾನಗರ ಪಾಲಿಕೆ ಬಜೆಟ್ ಮಂಡಿಸಿದ್ದು ಈ ಬಜೆಟ್ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಹಾಗೂ ರಮೇಶ್ ಕುಡಚಿ ಅವರು ಬಜೆಟ್ ಮಂಡನೆ ಪ್ರಕ್ರಿಯೆಗೆ ತೀವ್ರವಾದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಾನಗರ ಪಾಲಿಕೆಯ ಸಭಾಂಗಣದ ಶಿಷ್ಟಾಚಾರವನ್ನು ಗಾಳಿಗೆ ತೂರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರ.
ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಅವರ ಮೇಲೆ ತಿವರ ವಾಗ್ದಾಳಿ ನಡೆಸಿದರು. ಸಭಾಂಗಣದಲ್ಲಿ ನಿಮ್ಮ ಕೆಲಸ ಏನು ಮಹಾನಗರ ಪಾಲಿಕೆಯ ಮಹಾಪೌರರು ಆದೇಶದ ಮೇರೆಗೆ ನಡೆಯುವಂತ ನೀವು ಮಹಾಪೌರರ ಹುದ್ದೆಗೆ ಅಗೌರವ ತಂದಿದ್ದೀರಿ ಸಭಾಂಗಣದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡುವುದು ಸಭಾಂಗಣದ ಶಿಷ್ಟಾಚಾರದ ವಿರುದ್ಧವಾಗಿದೆ. ಈ ಅಧಿಕಾರವನ್ನು ನೀಡಿದವರು ಯಾರು ? ನಿಮಗೆ ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.
ಸ್ಥಾಯಿ ಸಮೀತಿ ರಚನೆ ಆಗದಿರುವುದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆ ಸಂಪೂರ್ಣವಾಗಿ ಸಂವಿಧಾನ ನೇಮಾವಳಿಗಳನ್ನು ಗಾಳಿಗೆ ತೂರಿದ್ದಾರೆ.
ಸ್ಥಳೀಯ ಸಂಸ್ಥೆಗಳ ಕಾನೂನು ತಜ್ಞರು ಇದನ್ನು ಒಪ್ಪುವುದಿಲ್ಲ ಮಹಾನಗರ ಪಾಲಿಕೆ ಎರಡು ಸಲ ಮಹಾಪೌರರಾಗಿ ಅನೇಕ ಹುದ್ದೆಗಳನ್ನು ಅಲಂಕರಿಸಿ 27 ವರ್ಷಗಳ ಕಾಲ ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸಿದ್ದೇನೆ ಈ ಕಾಲಾವಧಿಯಲ್ಲಿ ಎಂದು ನಡೆಯದ ಶಿಷ್ಟಾಚಾರ ಉಲ್ಲಂಘನೆ, ಈಗ ಆಗುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ಅಲ್ಲದೆ ಇದೇ ರೀತಿ ಮಹಾನಗರ ಪಾಲಿಕೆಯನ್ನು ನಡೆಸುವುದಾದರೆ ನಾವು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


