ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು.
ನೌಕರರರು ಮುಷ್ಕರ ಆರಂಭಿಸುವುದಕ್ಕೂ ಮುನ್ನ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ. ಈ ಹಿನ್ನೆಲೆ ಕೆಪಿಟಿಸಿಎಲ್ ನೌಕರರು ನಾಳೆಯ ಮುಷ್ಕರನ್ನು ವಾಪಸ್ ಪಡೆದಿದ್ದಾರೆ.
2022ರ ಏಪ್ರಿಲ್ ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


