ಅದಾನಿ ಸಮೂಹ ಸಂಸ್ಥೆಗಳ ಮೇಲಿನ ವಂಚನೆ ಆರೋಪ ತನಿಖೆಗೆ ಒತ್ತಾಯಿಸಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲು ಸಂಸತ್ ಭವನದಿಂದ ಪ್ರತಿಭಟನೆ ನಡೆಸಲು ಮುಂದಾಗಿದ್ದ ನಾಯಕರು ಪ್ರತಿಭಟನೆ ರದ್ದುಪಡಿಸಿದ್ದಾರೆ.
18 ವಿರೋಧ ಪಕ್ಷಗಳ ನಾಯಕರು ಸಂಸತ್ತಿನಿಂದ ಇಂದು ಮಧ್ಯಾಹ್ನ ಮೆರವಣಿಗೆ ಆರಂಭಿಸಿದ್ದರು. ಮೆರವಣಿಗೆ ಆರಂಭವಾಗುತ್ತಿದ್ದಂತೆಯೇ ದೆಹಲಿ ಪೊಲೀಸರು ನಾಯಕರನ್ನು ತಡೆದರು.
ಪ್ರತಿಭಟನಾನಿರತ ನಾಯಕರು ಇ.ಡಿ ಕಚೇರಿ ಕಡೆಗೆ ಮೆರವಣಿಗೆ ಸಾಗುವುದನ್ನು ತಡೆಯಲು ದೆಹಲಿ ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದು, ಭಾರೀ ಪ್ರಮಾಣದಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದ್ದರು. ಅಲ್ಲದೆ, ಸ್ಥಳದಲ್ಲಿ ಸೆಕ್ಷನ್ 144ನ್ನೂ ಜಾರಿಗೊಳಿಸಿದ್ದರು.
ಬಿಗಿ ಪೊಲೀಸ್ ಬಂದೋ ಬಸ್ತ್ ಹಿನ್ನೆಲೆಯಲ್ಲಿ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


