ಬೆಂಗಳೂರು: ಬೆಂಗಳೂರು–ಮೈಸೂರು ಎಕ್ಸ್ ಪ್ರೆಸ್ ವೇ ರಸ್ತೆ ಕಿತ್ತುಬಂದಿಲ್ಲ, ನ್ಯೂನ್ಯತೆಯನ್ನು ಸರಿಪಡಿಸಲಾಗುತ್ತಿದೆ ಎಂದು ರಸ್ತೆ ಕಿತ್ತು ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಎಕ್ಸ್ ಪ್ರೆಸ್ ವೇ ರಸ್ತೆ ಕಿತ್ತುಬಂದಿದೆ ಎಂಬ ಸುದ್ದಿಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ರಸ್ತೆ ಕಿತ್ತು ಬಂದಿಲ್ಲ, ಎಕ್ಸ್‌ಪನ್ಶನ್ ಜಾಯಿಂಟ್ ಬಳಿ ಇದ್ದ ಸಣ್ಣ ನ್ಯೂನತೆಯನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇನ್ನೂ ಪ್ರತಾಪ್ ಸಿಂಹ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಮಾನ್ಯ ಸಂಸದರೇ, ಯಾರ ಕಿವಿಗೆ ಹೂವು ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಎಂದು ಪ್ರಶ್ನೆಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


