ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 20ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಲು ಆಟೋ ಚಾಲಕರು ಮುಂದಾಗಿದ್ದಾರೆ.
ಈ ಕುರಿತು ಮಾತನಾಡಿದ ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್, ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ನಗರದ 21 ಆಟೋ ಚಾಲಕರ ಸಂಘಟನೆಗಳು ರಾಜ್ಯ ಒತ್ತಾಯ ಮಾಡಿವೆ. ಈ ಹಿನ್ನಲೆ ಮಾ.20 ರಂದು ಬೆಂಗಳೂರಿನಲ್ಲಿ ಆಟೋ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಸಾರಿಗೆ ಇಲಾಖೆ ಓಲಾ, ಉಬರ್ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಇದರಿಂದ ಆಟೋ ಚಾಲಕರ ಆದಾಯಕ್ಕೆ ಹೊಡೆತ ಬಿದ್ದಿದೆ. ಕೂಡಲೇ ರ್ಯಾಪಿಡೋ ಬೈಕ್ ಟ್ಯಾಕ್ಸಿ ಅನುಮತಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಬೆಂಗಳೂರಲ್ಲಿ 21 ಆಟೋ ಚಾಲಕರ ಸಂಘಟನೆಗಳಿಂದ, ನಾಳೆ (ಮಾ.16) ರಿಂದ ಆಟೋಗಳಲ್ಲಿ ಕಪ್ಪು ಬಾವುಟ ಕಟ್ಟಿಕೊಂಡು ಪ್ರತಿಭಟನೆ ಮಾಡುತ್ತೇವೆ. 2 ದಿನಗಳ ಕಾಲ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಗಡುವು ನೀಡುತ್ತೇವೆ. ಮಾರ್ಚ್ 20 ರಂದು ಸಾರ್ವಜನಿಕರಿಗೆ ಆಟೋ ಸೇವೆ ಇರಲ್ಲ. ಅಂದು ಪ್ರತಿಭಟನೆ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮನಗೆ ಮುತ್ತಿಗೆ ಹಾಕುತ್ತೇವೆ ಎಂದು ಮಂಜುನಾಥ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA