ಸಚಿವ ಸೋಮಣ್ಣ ಅಸಮಾಧಾನ ವಿಚಾರ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಸಚಿವ ಸೋಮಣ್ಣ ಪಕ್ಷ ಬಿಡುವುದಿಲ್ಲ. ಸಚಿವಸೋಮಣ್ಣ ಆ ಭಾಗದಲ್ಲಿ ಒಳ್ಳೆ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ಗೌರವವಿದೆ. ಹೀಗಾಗಿ ಸೋಮಣ್ಣ ನಮ್ಮ ಜೊತೆ ಇರ್ತಾರೆ. ಸೋಮಣ್ಣ ಸಹಕಾರದಿಂದಲೇ ನಾವು ಅಧಿಕಾರಕ್ಕೆ ಬಂದಿದ್ದು ಎಂದರು.
ಕಾಂಗ್ರೆಸ್ ಸರ್ಕಾರವಿದ್ದಾಗ ತುರ್ತು ಪರಿಸ್ಥಿತಿ ಜಾರಿಗೆ ತಂದರು. ಅಟಲ್ ಬಿಹಾರಿ ವಾಜಿಪೇಯಿ ಸೇರಿ ಅನೇಕರನ್ನ ಆಗ ಬಂಧಿಸಿದ್ದರು. ಇವತ್ತು ಅದೇ ಕಾಂಗ್ರೆಸ್ ನವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ. ಮೋದಿ ಅಮಿತ್ ಶಾರನ್ನ ಎದುರಿಸುವಂತಹ ನಾಯಕರು ಯಾರು ಇಲ್ಲ. ಕಾಂಗ್ರೆಸ್ ನಲ್ಲಿ ಯಾರು ಇಲ್ಲ ಅನ್ನೋದು ಸಾಮಾನ್ಯ ಜನರ ಭಾವನೆ. ಹೀಗಾಗಿ ರಾಜ್ಯದಲ್ಲಿ 140ಕ್ಕೂ ಹೆಚ್ಚು ಸೀಟ್ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಬಿಎಸ್ ವೈ ತಿಳಿಸಿದರು.
ಬಾಗಲಕೋಟೆಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಹೆಚ್ಚು ಹೆಚ್ಚು ಪ್ರಚಾರ ಮಾಡಿದ್ದಷ್ಟು ನಾವು ಹೆಚ್ಚು ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೇವೆ. ನಾವು ಹೆಚ್ಚು ಸ್ಥಾನಗಳನ್ನ ಗೆಲ್ಲುವುದಕ್ಕೆ ಅನುಕೂಲ ಆಗುತ್ತದೆ. ನಮ್ಮ ನಾಯಕರಿಗೂ ರಾಹುಲ್ ಗಾಂಧಿಗೂ ಎಲ್ಲಿಂದ ಎಲ್ಲಿ ಸಂಬಂಧ. ಮೋದಿ, ಅಮಿತ್ ಶಾ ಮುಂದೆ ರಾಹುಲ್ ಯಾವ ಲೆಕ್ಕ. ರಾಹುಲ್ ಗಾಂಧಿ ಪ್ರಚಾರದಿಂದ ಯಾವುದೇ ಪರಿಣಾಮ ಬೀರಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


