ಸಲ್ಮಾನ್ ಯೂಸುಫ್ ಇಂದು ಬೆಳಿಗ್ಗೆ ತಮ್ಮ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಅದರಲ್ಲಿ ಕನ್ನಡದಲ್ಲಿ ಮಾತನಾಡದ್ದಕ್ಕೆ ವಿಮಾನ ನಿಲ್ದಾಣದಲ್ಲಿ ತನಗೆ ಹೇಗೆ ಕಿರುಕುಳ ನೀಡಲಾಯಿತು ಎಂಬುದನ್ನು ವಿವರಿಸಿದ್ದಾರೆ.
ಕನ್ನಡದಲ್ಲಿ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಅಧಿಕಾರಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಲ್ಮಾನ್ ಲೈವ್ ಬಂದು ತಮ್ಮ ಅನುಭವವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ನಾನು ದುಬೈಗೆ ತೆರಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ನನಗೆ ಭಾಷೆ ಅರ್ಥವಾಗುತ್ತದೆ. ಆದರೆ ಚೆನ್ನಾಗಿ ಮಾತನಾಡಲು ಬರುವುದಿಲ್ಲ. ಆದರೂ ಕನ್ನಡದಲ್ಲೇ ಹೇಳಲು ಪ್ರಯತ್ನಿಸಿದೆ.
ಆದರೂ ಅಧಿಕಾರಿ ಪಾಸ್ಪೋರ್ಟ್ ತೋರಿಸಿ ತಂದೆ ತಾಯಿಯ ಹೆಸರು, ಹುಟ್ಟಿದ ಊರು ಹೇಳಿ ನೀವು ಮತ್ತು ನಿಮ್ಮ ತಂದೆ ಬೆಂಗಳೂರಿನಲ್ಲಿ ಹುಟ್ಟಿದ್ದು ನಿಮಗೆ ಕನ್ನಡ ಭಾಷೆ ಬರುವುದಿಲ್ಲವೇ? ಅಧಿಕಾರಿಯ ಪ್ರಶ್ನೆಗೆ ಉತ್ತರಿಸುವಾಗ ನನಗೆ ಕನ್ನಡ ಬರುವುದಿಲ್ಲ ಎಂದು ಸಲ್ಮಾನ್ ವಿಡಿಯೋದಲ್ಲಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


