ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ರಾಜೀನಾಮೆ ನೀಡಿದ್ದು ಇಂದೇ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೋಹನ್ ಲಿಂಬಿಕಾಯಿ ಇಂದು ಬೆಳಗ್ಗೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸಹಾಯಕರ ಮೂಲಕ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ ಲಿಂಬಿಕಾಯಿ, ಇಂದು ಸಂಜೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಬಿಜೆಪಿ ತ್ಯಜಿಸಿ ಕೆಜೆಪಿ ಕಟ್ಟಿದ ವೇಳೆ ಮೊದಲನೆಯದಾಗಿ ರಾಜೀನಾಮೆ ಸಲ್ಲಿಸಿದ್ದು ಮೋಹನ್ ಲಿಂಬಿಕಾಯಿ ಅವರಾಗಿದ್ದರು. ಅಂದು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಎಸ್ವೈ ಹಿಂದೆ ಸಾಗಿದ್ದರು. ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


