nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಗೃಹಿಣಿಯರೇ, ವಿದ್ಯಾರ್ಥಿಗಳೇ ಎಚ್ಚರ! ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಆನ್ ಲೈನ್ ವಂಚಕರ ಜಾಲ!

    October 29, 2026

    ರೈಲಿನಲ್ಲಿ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ಬಂದ್? ಪ್ರಯಾಣಿಕರು ತಿಳಿಯಬೇಕಾದ ಮಾಹಿತಿ

    October 29, 2026
    Facebook Twitter Instagram
    ಟ್ರೆಂಡಿಂಗ್
    • ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್
    • ಗೃಹಿಣಿಯರೇ, ವಿದ್ಯಾರ್ಥಿಗಳೇ ಎಚ್ಚರ! ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಆನ್ ಲೈನ್ ವಂಚಕರ ಜಾಲ!
    • ರೈಲಿನಲ್ಲಿ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ಬಂದ್? ಪ್ರಯಾಣಿಕರು ತಿಳಿಯಬೇಕಾದ ಮಾಹಿತಿ
    • ಕಿಡ್ನಿ ರೋಗಿಗಳಿಗೆ ಮನೆಬಾಗಿಲಲ್ಲೇ ಡಯಾಲಿಸಿಸ್ ಸೇವೆ? ಕಿಡ್ನಿ ರೋಗಿಗಳಿಗೆ ಗುಡ್‌ ನ್ಯೂಸ್
    • ಹೊಸಕೋಟೆ, ತುಮಕೂರಿಗೂ ಮೆಟ್ರೋ ಸಂಪರ್ಕ: ಬೆಂಗಳೂರಿನ ಸುತ್ತಮುತ್ತ ಭೂಮಿಗೆ ಹೆಚ್ಚುತ್ತಾ ಬೇಡಿಕೆ?
    • ಕೃಷಿ ಹೊಂಡಕ್ಕೆ ಬಿದ್ದು ದಂಪತಿ ಸಾವು: ಪತ್ನಿಯನ್ನು ರಕ್ಷಿಸಲು ಹೋದ ಪತಿಯೂ ಸಾವು!
    • ವಿಧಾನಪರಿಷತ್ ಚುನಾವಣೆ ಸೋಲಿಗೆ ನಮ್ಮವರೇ ಕಾರಣ: ಕೆ.ಎನ್. ರಾಜಣ್ಣ ಆಕ್ರೋಶ
    • ಉಪವಿಭಾಗ ಕಚೇರಿ ಸಮೀಪ ಹೊಸ ಬಾರ್‌ ಗೆ ಅನುಮತಿ ನೀಡಲು ಸಿದ್ಧತೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ: ಹೆಚ್.ಡಿ ಕುಮಾರಸ್ವಾಮಿ
    ರಾಜ್ಯ ಸುದ್ದಿ March 18, 2023

    ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ: ಹೆಚ್.ಡಿ ಕುಮಾರಸ್ವಾಮಿ

    By adminMarch 18, 2023No Comments2 Mins Read
    h dk

    ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತು ಸತ್ಯ ಎಂದು ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

    ಉರಿಗೌಡ ಮತ್ತು ನಂಜೇಗೌಡ ವಿಚಾರಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿ ಬಿಜೆಪಿ ನಾಯಕರ ವಿರುದ್ಧ ಗುಡುಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ. ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ.

    ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ ಎಂದು ಕಿಡಿಕಾರಿದ್ದಾರೆ.

    ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ. ಸಚಿವರು, ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ ಉರಿಗೌಡ ನಂಜೇಗೌಡ ‘ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ.

    ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೆಚ್ .ಡಿಕೆ ಹರಿಹಾಯ್ದಿದ್ದಾರೆ.

    ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ, ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು.

    ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ.

    ವಿಜ್ಞಾನ,ತಂತ್ರಜ್ಞಾನ,ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು.ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ಹೆಚ್.ಡಿಕೆ ವಾಗ್ದಾಳಿ ನಡೆಸಿದ್ದಾರೆ.

    ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ. ಪ್ರತೀ ಸೂಕ್ಷ್ಮ ವಿಷಯದಲ್ಲೂ ಮತ ರಾಜಕಾರಣ ಮಾಡುವ ಕಮಲ ಪಕ್ಷಕ್ಕೆ ಕರ್ನಾಟಕವೇ ಪ್ರಯೋಗ ಶಾಲೆ. ಜಾತಿ, ಧರ್ಮಗಳ ನಡುವೆ ಕಿಚ್ಚಿಟ್ಟು, ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ಕೋಮುಪ್ರಾಷನ ಮಾಡಿಸುತ್ತಿದೆ . ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬಿಜೆಪಿ ಬೀರುತ್ತಿರುವ ವಕ್ರದೃಷ್ಟಿ… ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ನಾಯಕರನ್ನ ಕುಟುಕಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026

    ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!

    October 27, 2026

    Comments are closed.

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಕ್ಯಾನ್ಸರ್ ಚಿಕಿತ್ಸೆಯ ವೆಚ್ಚದಿಂದ ಕಂಗಾಲಾಗಿರುವ ರೋಗಿಗಳಿಗೆ ತುಸು ನೆಮ್ಮದಿ ನೀಡುವ ಬೆಳವಣಿಗೆ ನಡೆದಿದೆ. ಭಾರತೀಯ ಔಷಧ ಬೆಲೆ ನಿಯಂತ್ರಣ ಸಂಸ್ಥೆ…

    ಗೃಹಿಣಿಯರೇ, ವಿದ್ಯಾರ್ಥಿಗಳೇ ಎಚ್ಚರ! ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಆನ್ ಲೈನ್ ವಂಚಕರ ಜಾಲ!

    October 29, 2026

    ರೈಲಿನಲ್ಲಿ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮೊಬೈಲ್ ಚಾರ್ಜಿಂಗ್ ಬಂದ್? ಪ್ರಯಾಣಿಕರು ತಿಳಿಯಬೇಕಾದ ಮಾಹಿತಿ

    October 29, 2026

    ಕಿಡ್ನಿ ರೋಗಿಗಳಿಗೆ ಮನೆಬಾಗಿಲಲ್ಲೇ ಡಯಾಲಿಸಿಸ್ ಸೇವೆ? ಕಿಡ್ನಿ ರೋಗಿಗಳಿಗೆ ಗುಡ್‌ ನ್ಯೂಸ್

    October 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.