ಉರಿಗೌಡ ನಂಜೇಗೌಡ ಸಿನಿಮಾ ಕುರಿತು ಭಾರಿ ವಾದ ವಿವಾದಗಳು ನಡೆಯುತ್ತಿದ್ದು ಸಿನಿಮಾ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವಿಟ್ ಮಾಡಿದ್ದಾರೆ. ಮುನಿರತ್ನ ಅವರು ಈ ಸಿನೇಮಾ ನಿರ್ಮಾಣಕ್ಕೆ ಮುಂದಾಗಿದ್ದು ಇವರ ವಿರುದ್ಧವು ಎಚ್.ಡಿಕೆ ಟ್ವಿಟ್ ಮಳೆಗೈದಿದ್ದಾರೆ.
ಕಲ್ಪಿತ ಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿ, ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೇಬೇಕೆಂಬ ಹಿಡೆನ್ ಅಜೆಂಡ ಬಿಜೆಪಿಗೆ ಇರುವುದಂತೂ ಸತ್ಯ ಎಂದು ಟ್ವೀಟ್ ಮಾಡಿದ್ದಾರೆ ಕುಮಾರಸ್ವಾಮಿ.
ಸಚಿವರು ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ ಮೂಲಕ ಉರಿಗೌಡ-ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ’ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ ಕುಮಾರಸ್ವಾಮಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy