ಬೆಂಗಳೂರು ಕರಗವನ್ನ ನಾಟಕ ಎಂದು ಹೇಳಿಕೆ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಇದೀಗ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕ್ಷಮೆಯಾಚನೆ ಕೇಳಿದ್ದಾರೆ.
ಕಾಂಗ್ರಸ್ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಬೆಂಗಳೂರು ಕರಗವನ್ನ ನಾಟಕ ಎಂದಿದ್ದರು. ಈ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಕ್ಷಮೆಯಾಚನೆಯೂ ಮಾಡಿದ್ದರು. ಆದರೆ ಸುಮ್ಮನಾಗದ ತಿಗಳರ ಸಮಾಜದ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ನೇರವಾಗಿ ಶಾಸಕ ಹ್ಯಾರಿಸ್ ತಿಗಳರ ಪೇಟೆಯಲ್ಲಿರುವ ಶ್ರೀಧರ್ಮರಾಯಸ್ವಾಮಿ ದೇವಾಲಯಕ್ಕೆ ತೆರಳಿ ಕ್ಷಮೆಯಾಚಿಸಿದ್ದಾರೆ. ದೇವರ ಮೇಲೆ ನನಗೆ ಅಪಾರ ಭಕ್ತಿ ಗೌರವವಿದೆ ಧರ್ಮಾರಾಯಸ್ವಾಮಿ ದೇವಾಲಯದಲ್ಲಿ ನಾನು ಕ್ಷಮೆ ಕೇಳಿದ್ದೇನೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


