ಕೋಲಾರದಿಂದ ಸಿದ‍್ಧರಾಮಯ್ಯ ಸ್ಪರ್ಧಿಸದಿದ್ದರೇ ನಾನು ರಾಜಕೀಯ ನಿವೃತ್ತಿ ಪಡೆಯುವೆ ಎಂದು ಕೋಲಾರ ಶಾಸಕ ಶ್ರೀನಿವಾಸ್ ಗೌಡ ಹೇಳಿಕೆ ನೀಡಿದ್ದಾರೆ.
ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ವಿಚಾರ ಕುರಿತು ಮಾತನಾಡಿದ ಶಾಸಕ ಶ್ರೀನಿವಾಸ್ ಗೌಡ, ಸಿದ್ಧರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೇ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ.
ಕೋಲಾರದಿಂದ 2ನೇ ಮುಖ್ಯಮಂತ್ರಿಯನ್ನು ರಾಜ್ಯಕ್ಕೆ ಕೊಡಬೇಕು ಎಂಬ ಆಸೆ ಇತ್ತು. ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನನ್ನು ಕರೆದು ಮಾತಾಡಿದ ಬಳಿಕ ಕ್ಷೇತ್ರ ಬಿಟ್ಟು ಕೊಟ್ಟಿದ್ದೇನೆ. ಈಗ ನನ್ನನ್ನು ಕೇಳದೆ ನಿರ್ಧಾರ ಕೈಗೊಂಡರೆ ಮಾತನಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಈಗ ನನ್ನನು ಏನೂ ಕೇಳದೆ ಈ ನಿರ್ಧಾರ ತೆಗೆದುಕೊಂಡರೆ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದರು. ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಶಾಸಕ ಶ್ರೀನಿವಾಸಗೌಡ, ಈ ಬಾರಿ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರವನ್ನ ಸಿದ‍್ಧರಾಮಯ್ಯಗೆ ಬಿಟ್ಟುಕೊಟ್ಟಿದ್ದಾರೆ.
ಸಿದ್ದರಾಮಯ್ಯ ಅವರು ಈ ಬಾರಿ ವಿಧಾನಸಭೆ ಚುನಾವಣೆಗೆ ಕೋಲಾದಿಂದ ಸ್ಪರ್ಧಿಸುವುದು ಬಹುತೇಕ ಖಚಿತವೆಂದೇ ಹೇಳಲಾಗಿತ್ತು. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದಿದ್ದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ, ಕೋಲಾರ ಕ್ಷೇತ್ರ ಬಿಟ್ಟು ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎನ್ನಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


