ಕಾಂಗ್ರೆಸ್ ಸೇರ್ಪಡೆ ವಿಚಾರ ಮುಗಿದ ಅಧ್ಯಾಯ ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ವಿ.ಸೋಮಣ್ಣ, ನಾನು ಡೈರೆಕ್ಟ್ ರಾಜಕಾರಣಿ, ಏನೇ ಇದ್ದರೂ ನೇರವಾಗಿ ಹೇಳುತ್ತೇನೆ. ಕಾಂಗ್ರೆಸ್ ಗೆ ಸೇರುವ ವಿಷಯ ನನ್ನ ತಲೆಯಲ್ಲೇ ಇಲ್ಲ. ಅವೆಲ್ಲಾ ಮುಗಿದ ಅಧ್ಯಾಯ ಎಂದು ತಿಳಿಸಿದರು.
ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸೋಮಣ್ಣ, ರಾಜ್ಯದ 224 ಕ್ಷೇತ್ರಗಳಲ್ಲಿ ಸೋಮಣ್ಣಗೆ ಹಲವಾರು ಕ್ಷೇತ್ರಗಳ ಪರಿಚಯ ಇದೆ. ಜಿಲ್ಲೆಯಿಂದ ಸ್ಪರ್ಧಿಸುವ ಯೋಚನೆ ಇಲ್ಲ. ಚಾಮರಾಜನಗರ ನನ್ನ ಪ್ರೀತಿಯ ಜಿಲ್ಎಲ ಹೌದು. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


