ತುರುವೇಕೆರೆಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯು ಐತಿಹಾಸಿಕವಾಗಿ ಅಚ್ಚಳಿಯದೇ ಉಳಿಯುವಂತಹ ಕಾರ್ಯಕ್ರಮವಾಗಿದ್ದು, ತುರುವೇಕೆರೆ ಇತಿಹಾಸದಲ್ಲಿಯೇ ಯಾವ ಪಕ್ಷಗಳು ಮಾಡಿರದಂತಹ ಕಾರ್ಯಕ್ರಮವಾಗಿದೆ ಎಂದು ಶಾಸಕ ಮಸಾಲ ಜಯರಾಮ್ ಹೇಳಿದರು.
ತಮ್ಮ ಫಾರ್ಮ್ ಹೌಸ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ. ಮಾಧುಸ್ವಾಮಿ, ಸಿ ಟಿ ರವಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಸಂಸದರಾದ ಜಿ.ಎಸ್ .ಬಸವರಾಜ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಡಿ.ಲಕ್ಷ್ಮೀನಾರಾಯಣ್ , ಮಾಜಿ ಸಂಸದರಾದ ಮುದ್ದಹನುಮೇಗೌಡ, ಆರ್ .ದೇವೇಗೌಡ , ವೈ.ಎ.ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರು ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತ ಎಲ್ಲರೂ ಸೇರಿ ಈ ಕಾರ್ಯಕ್ರಮವನ್ನು ಅತ್ಯಂತ ಅದ್ಭುತವಾಗಿ ಯಶಸ್ವಿಗೊಳಿಸಿದ್ದಾರೆ ಎಂದರು.
ತಾಲೂಕಿನಲ್ಲಿ ಭಾರತೀಯ ಜನತಾ ಪಕ್ಷವು ಬಹಳ ಸದೃಢವಾಗಿದೆ. ಇಡೀ ಜಿಲ್ಲೆಯೇ ನಮ್ಮ ತಾಲೂಕನ್ನು ಒಮ್ಮೆ ತಿರುಗಿ ನೋಡುವಂತಾಗಿದೆ. ನನ್ನ ಆತ್ಮೀಯ ಎಲ್ಲಾ ಕಾರ್ಯಕರ್ತರುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೂ ಸಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಧನ್ಯವಾದಗಳು ಅರ್ಪಿಸುತ್ತೇನೆ ಎಂದು ಹೇಳಿದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


