ಬೀದರ್ ಜಿಲ್ಲೆಯ ಔರಾದ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನರು ಪರದಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ತಕ್ಷಣವೇ ಬಗೆ ಹರಿಸುವಂತೆ ಸುಧಾಕರ್ ಕೊಳ್ಳುರ ಆಗ್ರಹಿಸಿದರು.
ಇಂದು ಗ್ರಾಮಕ್ಕೆ ಭೇಟಿ ನೀಡಿದ ಸುಧಾಕರ್ ಅವರು, ಗ್ರಾಮದ ನೀರಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಬಳಿ ದೂರವಾಣಿ ಮೂಲಕ ಮಾತನಾಡಿ, ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದರು.
ಗ್ರಾಮದಲ್ಲಿ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಈ ಕಡೆಗೆ ಗಮನ ನೀಡುತ್ತಿಲ್ಲ ಎಂದು ಸುಧಾಕರ್ ಕೊಳ್ಳುರ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಂಕು ನಿಷ್ಪತೆ, ಹರಿದೇವ ಸಂಗನಾಳ, ಇಬ್ರಾಹಿಂ, ನಬಿ ಮುಲ್ಲಾ, ಸೈಯದ್ ಇಸ್ಮೈಲ್, ರಂಜಿತ್, ಶಾಮ, ಸಂಜು ಕಂಬಳೆ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


