ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇವತ್ತು ಬಿಡುಗಡೆ ಮಾಡುತ್ತಿಲ್ಲ, ಆದರೆ ಇನ್ನೂ ಎರಡು, ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೆ ಹಲವು ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಮಲ್ಲಿಕಾರ್ಜುನ ಖರ್ಗೆ ಅವರು ಹಬ್ಬಕ್ಕೆ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ ಎರಡು ಮೂರು ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಕಳೆದ 3 ವರ್ಷಗಳಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಯುಗಾದಿ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ಈ ರೀತಿ ನೀವೂ ಹಾರೈಸಿ. ಕಾಂಗ್ರೆಸ್ ಸರ್ಕಾರ ಜನಪರವಾಗಿರಲಿದೆ. ಹಲವಾರು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೀವಿ. ಬಿಜೆಪಿಯವರ ತರಹ ನಾವು ಸುಳ್ಳು ಆಶ್ವಾಸನೆ ಕೊಡಲ್ಲ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


