ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನನ್ನು ಬಂಧಿಸಲಾಗಿದೆ. ಭದ್ರತಾ ಪಡೆಗಳೊಂದಿಗೆ ಜಮ್ಮು ಪೊಲೀಸರು ನಡೆಸಿದ ಜಂಟಿ ಶೋಧದಲ್ಲಿ ಭಯೋತ್ಪಾದಕ ಸಿಕ್ಕಿಬಿದ್ದಿದ್ದಾನೆ. ಆತನ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಭಯೋತ್ಪಾದಕ ಚಟುವಟಿಕೆಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ (52RR) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (177 Bn) ಜಂಟಿಯಾಗಿ ಪೇತ್ ಸೀರ್ ರೈಲು ನಿಲ್ದಾಣದ ಬಳಿ ಶೋಧ ಕಾರ್ಯಾಚರಣೆ ನಡೆಸಿತು. ಇದೇ ವೇಳೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಭಯೋತ್ಪಾದಕನನ್ನು ಜಂಟಿ ತಂಡ ವ್ಯೂಹಾತ್ಮಕವಾಗಿ ಬಂಧಿಸಿದೆ.
ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್ ಜತೆ ನಂಟು ಹೊಂದಿರುವ ಮಂಚಸೀರ್ ನಿವಾಸಿ ಉಮರ್ ಬಶೀರ್ ಭಟ್ ಬಂಧಿತ ಆರೋಪಿ. ಆತನ ಬಳಿಯಿಂದ ಒಂದು ಹ್ಯಾಂಡ್ ಗ್ರೆನೇಡ್, ಪಿಸ್ತೂಲ್, ಪಿಸ್ತೂಲ್ ಮ್ಯಾಗಜೀನ್, 15 ಸುತ್ತಿನ ಪಿಸ್ತೂಲ್ ಮತ್ತು ಸಿಮ್ ಕಾರ್ಡ್ ಹೊಂದಿರುವ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


