ಬೆಳಗಾವಿ: 2023ರ ಕರ್ನಾಟಕ ಚುನಾವಣೆಯಲ್ಲಿ ಕರ್ನಾಟಕ ಕಲ್ಯಾಣ್ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಪ್ರವೀಣ್ ಬಸವರಾಜ್ ಹಿರೇಮಠ್ ಅವರು ಕೆ ಆರ್ ಪಿ ಪಿ ಇಂದ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು
ನಗರದಲ್ಲಿ ಹಮ್ಮಿಕೊಳ್ಳಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಗಾವಿ ನಗರ ಸ್ಮಾರ್ಟ್ ಸಿಟಿ ಯಾಗಿ ಪರಿವರ್ತನೆಗೊಂಡ ಸಂದರ್ಭದಲ್ಲಿನಾನು ನೋಡುತ್ತಿರುವ ನಗರ ಇದು ಸ್ಮಾರ್ಟ್ ಸಿಟಿ ಹೌದು ಅಥವಾ ಅಲ್ಲು ಎಂಬ ಭ್ರಮೆಯಲ್ಲಿ ನಾನಿದ್ದೇನೆ!
ಎಲ್ಲಿ ನೋಡಿದಲ್ಲಿ ಅವ್ಯವಸ್ಥೆಯ ಗೂಡಾಗಿರುವ ಬೆಳಗಾವಿ ನಗರ ರಾಜ್ಯ ಹಾಗೂ ದೇಶದಲ್ಲಿ ಪ್ರಸಿದ್ಧಿ ಪಡೆದಿರುವಂತ ನಗರ. ಈ ನಗರ ಹಾಗೂ ಇಲ್ಲಿಯ ರಾಜಕಾರಣವನ್ನು ಬದಲಾವಣೆ ಮಾಡಲು ನಮ್ಮಂತ ಯುವಕರು ರಾಜಕಾರಣಕ್ಕೆ ಬರಬೇಕೆಂದು ನಾನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಜನಾರ್ಧನ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಲು ನಾವು ಸಿದ್ಧರಿದ್ದೇವೆ ಎಂದರು.
ಈ ಪಕ್ಷ ಬೆಳಗಾವಿ ಜಿಲ್ಲೆಯಲ್ಲಿ ಉತ್ತರ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿಯನ್ನು ಈಗ ಘೋಷಣೆ ಮಾಡಲಾಗಿದೆ ಮುಂಬರುವ ದಿನಗಳಲ್ಲಿ ನಮ್ಮ ಹಿರಿಯ ನಾಯಕರುಗಳ ಕೈಗೊಂಡಿರುವಂತೆ ನಿರ್ಣಯಕ್ಕೆ ಪಕ್ಷದ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ ಎಂದು ಪ್ರವೀಣ್ ಹಿರೇಮಠ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


