nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026
    Facebook Twitter Instagram
    ಟ್ರೆಂಡಿಂಗ್
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    • ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈಯಕ್ತಿಕ ಸಂಕಷ್ಟದ ಮಧ್ಯೆಯೂ ಕೊಟ್ಟ ವಚನ ಈಡೇರಿಸಿದ್ದೇನೆ, ಮತ್ತೊಮ್ಮೆ ಆಶೀರ್ವದಿಸಿ: ಲಕ್ಷ್ಮೀ ಹೆಬ್ಬಾಳಕರ್
    ಜಿಲ್ಲಾ ಸುದ್ದಿ March 26, 2023

    ವೈಯಕ್ತಿಕ ಸಂಕಷ್ಟದ ಮಧ್ಯೆಯೂ ಕೊಟ್ಟ ವಚನ ಈಡೇರಿಸಿದ್ದೇನೆ, ಮತ್ತೊಮ್ಮೆ ಆಶೀರ್ವದಿಸಿ: ಲಕ್ಷ್ಮೀ ಹೆಬ್ಬಾಳಕರ್

    By adminMarch 26, 2023No Comments2 Mins Read
    laxmi hebalkar

    ಬೆಳಗಾವಿ: 5 ವರ್ಷಗಳ ಹಿಂದೆ ನಿಮ್ಮ ಮನೆ ಬಾಗಿಲಿಗೆ ಬಂದು, “ನನ್ನನ್ನು ಒಮ್ಮೆ ಆಯ್ಕೆ ಮಾಡಿ ಕಳುಹಿಸಿಕೊಡಿ, 25 ವರ್ಷಗಳ ಅಭಿವೃದ್ಧಿಯನ್ನು 5 ವರ್ಷದಲ್ಲಿ ಮಾಡಿ ನಿಮ್ಮ ಋಣವನ್ನು ತೀರಿಸುತ್ತೇನೆ” ಎಂದು ವಚನ ಕೊಟ್ಟಿದ್ದೆ. ಕಳೆದ 5 ವರ್ಷಗಳಲ್ಲಿ ಕೊರೋನಾ, ಪ್ರವಾಹದಂತಹ ಪ್ರಕೃತಿ ವಿಕೋಪದ ನಡುವೆಯೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವ ಮೂಲಕ ಕೊಟ್ಟ ವಚನವನ್ನು ಈಡೇರಿಸಿದ್ದೇನೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

    ಸುಳೇಭಾವಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಅಳವಡಿಸಲಾದ ಫೇವರ್ಸ್ ನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸ್ವಾಭಿಮಾನವನ್ನು ಎತ್ತಿ ಹಿಡಿದು, ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದೇನೆ. ವಿರೋಧ ಪಕ್ಷದಲ್ಲಿದ್ದರೂ ಆಡಳಿತ ಪಕ್ಷದ ಶಾಸಕರೂ ಮಾಡಲಾಗದಷ್ಟು ಕೆಲಸಗಳನ್ನು ಶಕ್ತಿ ಮೀರಿ ಮಾಡಿದ್ದೇನೆ. ಸರಕಾರದ ಅನುದಾನವಲ್ಲದೆ ಸ್ವಂತ ಹಣವನ್ನೂ ನೀಡಿ ಬಡವರ ಕಣ್ಣೀರು ಒರೆಸಿದ್ದೇನೆ. ನನ್ನ ಸ್ವಂತ ಅನಾರೋಗ್ಯವನ್ನೂ ಲೆಕ್ಕಿಸದೆ, ವಿಶ್ರಾಂತಿಯನ್ನೂ ತೆಗೆದುಕೊಳ್ಳದೆ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದೇನೆ. ನನ್ನ ಜೊತೆಗೆ ನೀವೆಲ್ಲ ಕೈ ಜೋಡಿಸಿ ಸಹಕರಿಸಿದ್ದೀರಿ. ನಿಮ್ಮ ಮನೆ ಮಗಳೆಂದು ಕೈ ಹಿಡಿದು ವಿಕಾಸದ ಹಾದಿಯಲ್ಲಿ ಮುನ್ನಡೆಸಿದ್ದೀರಿ. ನಿಮ್ಮ ಸಹಕಾರ, ಪ್ರೀತಿ, ವಿಶ್ವಾಸವಿಲ್ಲದಿದ್ದರೆ ಇವೆಲ್ಲ ಸಾಧ್ಯವಾಗುತ್ತಿರಲಿಲ್ಲ ಎಂದು ಭಾವುಕರಾಗಿ ಅವರು ನುಡಿದರು.

    ಕಳೆದ 5 ವರ್ಷದ ಅವಧಿಯಲ್ಲಿ ನಾನು ಎದುರಿಸಿದ ಸಂಕಷ್ಟಗಳು ಅಷ್ಟಿಷ್ಟಲ್ಲ. ಕೊರೋನಾ ಮಹಾಮಾರಿ ನಮ್ಮ ಇಡೀ ಕುಟುಂಬಕ್ಕೆ ಬಂದಿತ್ತು. ಆದರೆ ನಮ್ಮ ಕಷ್ಟದ ಮಧ್ಯೆಯೂ ಒಂದು ದಿನವೂ ಜನರನ್ನು ಮರೆಯದೆ, ನಾವು ಆಸ್ಪತ್ರೆಯಲ್ಲಿದ್ದರೂ ನಮ್ಮ ತಂಡದ ಮೂಲಕ ನಿಮಗೆಲ್ಲ ಸಾಧ್ಯವಾದಷ್ಟು ಸಹಾಯ ಮಾಡಿದ್ದೇನೆ. ಆಹಾರದ ಕಿಟ್ ಗಳನ್ನು ವಿತರಿಸುವ ವ್ಯವಸ್ಥೆ ಮಾಡಿದ್ದೇನೆ. ಮನೆ ಮನೆಗೆ ಔಷಧದ ಕಿಟ್ ಗಳನ್ನು ತಲುಪಿಸಿದ್ದೇನೆ. ಆರೋಗ್ಯ ಶಿಬಿರಗಳನ್ನು ಏರ್ಪಡಿಸಿದ್ದೇನೆ. ಅಂಬುಲನ್ಸ್ ವ್ಯವಸ್ಥೆ ಮಾಡಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದ್ದೇನೆ. ಆಸ್ಪತ್ರೆಯಲ್ಲಿ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡಿಸಿದ್ದೇನೆ. ಕೊರೋನಾ ಸಂದರ್ಭದಲ್ಲಿ ದುರದೃಷ್ಟವಶಾತ್ ಸಾವಿಗೀಡಾದವರ ಕುಟುಂಬದ ನೆರವಿಗೆ ಬಂದಿದ್ದೇನೆ. ಪ್ರವಾಹದ ಸಂದರ್ಭದಲ್ಲಿ ಮನೆ ಕಳೆದುಕೊಂಡವರ ನೆರವಿಗೆ ನಿಂತಿದ್ದೇನೆ. ಹಾಗಾಗಿ ಮತ್ತೊಮ್ಮೆ ನನಗೆ ಮತ ನೀಡುವ ಮೂಲಕ ರಾಜ್ಯದಲ್ಲೇ ಅತ್ಯಂತ ಹೆಚ್ಚು ಮತಗಳ ಅಂತರದಿಂದ ಆಯ್ಕೆಯಾಗುವಂತೆ ಮಾಡಿ ಎಂದು ವಿನಂತಿಸಿದರು.

    ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ದೇವಸ್ಥಾನದ ಟ್ರಸ್ಟ್ ಕಮೀಟಿಯವರು, ಮಹೇಶ ಸುಗಣೆನ್ನವರ, ಲಕ್ಷ್ಮಣ ಮಂಡು, ಶಂಕರಗೌಡ ಪಾಟೀಲ, ಬಸನಗೌಡ ಹುಂಕ್ರಿಪಾಟೀಲ, ದತ್ತಾ ಬಂಡಿಗಣಿ, ಸಂಭಾಜಿ ಯಮೋಜಿ, ತುಳಜಪ್ಪ ಯರಜರ್ವಿ, ಫಕೀರ ಕೋಲಕಾರ, ಲಕ್ಷ್ಮೀ ನಾರಾಯಣ ಕಲ್ಲೂರ, ತಿಪ್ಪಣ್ಣ ಲೋಕರೆ ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ

    May 12, 2026

    ತುಮಕೂರು: ಕಳೆದ ನಾಲ್ಕು ತಿಂಗಳಿಂದ ವೇತನವಿಲ್ಲದೆ ಆಶಾ ಕಾರ್ಯಕರ್ತೆಯರ ಜೀವನ ನಡೆಸುವುದು ಕಷ್ಟಕರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎರಡು…

    ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ

    May 12, 2026

    ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ

    May 12, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    May 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.