ಪಾವಗಡ: ತಾಲ್ಲೂಕಿನ ಭೂಪೂರು ಗ್ರಾಮದಲ್ಲಿ ಶನಿವಾರ ಪಲವಳ್ಳಿಯಿಂದ ಬಿ.ಕೆ.ಹಳ್ಳಿ ರಸ್ತೆ ಕಾಮಗಾರಿಗೆ ಶಾಸಕ ವೆಂಕಟರಮಣಪ್ಪ ಅವರು ಗುದ್ದಲಿ ಪೂಜೆ ನೆರವೇರಿಸಿದರು.
5 ಕೋಟಿ ವೆಚ್ಚದಲ್ಲಿ 7 ಕಿಲೋ ಮೀಟರ್ ರಸ್ತೆ ಕಾಮಗಾರಿ ಇದಾಗಿದ್ದು, ಬಹುಬೇಗನೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದರು.
ರಸ್ತೆ ಸಮಸ್ಯೆ ಬಿಟ್ಟರೆ ಯಾವುದೇ ಸಮಸ್ಯೆ ಇದ್ದಲ್ಲಿ ತಿಳಿಸಿ ಎಂದು ಕಾರ್ಯಕ್ರಮದಲ್ಲಿದ್ದ ಸಾರ್ವಜನಿಕರಿಗೆ ಹೇಳಿದರು.
ಈ ವೇಳೆ ಜೆಡಿಎಸ್ ಮುಖಂಡರಾದ ಚೆನ್ನಕೇಶವ ರೆಡ್ಡಿ ಹಾಗೂ ನಾಗಾರ್ಜುನ ರೆಡ್ಡಿ ಮತ್ತು ಅಂಬರೀಷ್, ಗೋಪಾಲ್, ರಾಮಾಂಜಿ, ಮೂತ್ಯಾಲಪ್ಪ, ಮಾರಪ್ಪ ಇನ್ನಿತರರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.
ಕಾರ್ಯಕ್ರಮದಲ್ಲಿ ಕಾಮನದುರ್ಗ ಗ್ರಾಮ ಪಂಚಾಯತಿ ಅಧ್ಯಕ್ಷ ರಾಮಾಂಜಿ ನಾಯ್ಕ, ಗಂಗಾಧರ ರೆಡ್ಡಿ, ಜಗನ್ನಾಥ್ ಶೆಟ್ಟಿ ಇನ್ನಿತರರಿದ್ದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy