ಬೀದರ್: ಮಹಿಳಾ ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ಸಾವಿರಾರು ಸೀರೆಗಳನ್ನು ಪೊಲೀಸರು ಜಪ್ತಿ ಮಾಡಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟದಲ್ಲಿ ನಡೆದಿದೆ.
ಚುನಾವಣೆ ಹತ್ತಿರ ಬರುತ್ತಿದ್ದಂತ್ತೆ ಬೀದರ್‌ನಲ್ಲಿ ಗಿಫ್ಟ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಸೋಮವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಭಾವ ಚಿತ್ರವಿರುವ ಸೀರೆಗಳ ಪ್ಯಾಕೆಟ್‌ಗಳನ್ನು ಭಾಲ್ಕಿ ನಗರದ ಮನೆ ಮನೆಗೆ ತೆರಳಿ ಕಾಂಗ್ರೆಸ್ ಕಾರ್ಯಕರ್ತರು ಹಂಚುತ್ತಿದ್ದರು. ಈ ಸಂದರ್ಭ ಬಿಜೆಪಿ ಕಾರ್ಯಕರ್ತರು ಎಂಟ್ರಿಯಾಗಿದ್ದಾರೆ.
ಭಾಲ್ಕಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಿಕೆ ಸಿದ್ರಾಮ್ ಹಾಗೂ ಕಾರ್ಯಕರ್ತರು ಆಗಮಿಸಿ ಪರಿಶೀಲನೆ ಮಾಡುತ್ತಿದ್ದಾಗ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಭಾಲ್ಕಿ ಪೊಲೀಸರು ಸಾವಿರಾರು ಸೀರೆ ಬಾಕ್ಸ್‌ಗಳನ್ನು ಜಪ್ತಿ ಮಾಡಿ ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


