ಬೆಂಗಳೂರಿನಲ್ಲಿ ಆಟೋ ಚಾಲಕರ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ ನಡುವೆ ಹಗ್ಗಜಗ್ಗಾಟ ಶುರುವಾಗಿದ್ದು, ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಬೆಂಗಳೂರು ಆಟೋ ಚಾಲಕರ ವಿರುದ್ದ ಇದೀಗ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದಾರೆ.
ನಗರದಲ್ಲಿ ಆಟೋ ಚಾಲಕರಿಂದ ನಡೆಯುತ್ತಿರುವ ನಿರಂತರ ದೌರ್ಜನ್ಯ ಖಂಡಿಸಿ ಇಂದು ಬೆಳಗ್ಗೆ ಫ್ರೀಡಂಪಾರ್ಕ್ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗಾಗಿ ಒತ್ತಾಯಿಸಿ ಸಾವಿರಾರು ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿಯಲ್ಲಿ ಪಾಲ್ಗೊಂಡು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೈಕ್ ಟ್ಯಾಕ್ಸಿ ಚಾಲಕರ ಪ್ರತಿನಿಧಿಸುವ ನಗರದ ಏಕೈಕ ಸಂಸ್ಥೆಯಾಗಿರುವ ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ಈ ಪ್ರತಿಭಟನೆಗೆ ಕರೆ ನೀಡಿದ್ದು, ತಮ್ಮ ಸದಸ್ಯರ ಮೇಲೆ ಆಗುತ್ತಿರುವ ನಿರಂತರ ದೌರ್ಜನ್ಯ ಪ್ರಶ್ನಿಸಿ ಇಂದು ಧರಣಿ ನಡೆಸುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


